ಜನಮನ
ಸೆ.12ರಿಂದ ಸೆ.14ರವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ

Views: 1
ದಕ್ಷಿಣ ಕನ್ನಡ, ಉಡುಪಿ,ಕೊಡಗು, ಉತ್ತರ ಕನ್ನಡ ಸಹಿತ ವಿವಿಧ ಜಿಲ್ಲೆಗಳಲ್ಲಿ ಸೆ.12 ರಿಂದ ಸೆ.14ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 6 ರ ವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸುವ ಈ ಹಿಂದಿನ ದಿನಾಂಕವನ್ನು ಪರಿಷ್ಕರಿಸಿ ಆಹಾರ ಇಲಾಖೆ ಆದೇಶಿಸಿದೆ.
ಈ ಹಿಂದೆ ಸೆ.1ರಿಂದ ಸೆ.10 ರವರೆಗೆ ಪಡಿತರ ಚೀಟಿ ತಿದ್ದುಪಡಿಗೆ ನಿಗದಿಪಡಿಸಿದ್ದ ಆದೇಶವನ್ನು ಇಲಾಖೆ ಹಿಂಪಡೆದಿದೆ.
ಪಡಿತರ ಚೀಟಿ ತಿದ್ದುಪಡಿಗೆ ಭರಪೂರ ಅರ್ಜಿ ಸಲ್ಲಿಕೆಯಾಗುತ್ತಿರುವ ಕಾರಣದಿಂದ ಆಹಾರ ಇಲಾಖೆಯ ಸರ್ವರ್ ನಲ್ಲಿ ಸಮಸ್ಯೆ ಕಾಣಿಕೊಂಡಿದೆ.ಕೆಲವು ಕಡೆ ಒಂದು ಗಂಟೆಯಲ್ಲಿ ಸುಮಾರು 500ಕ್ಕೂ ಹೆಚ್ಚು ಅಧಿಕ ಅರ್ಜಿ ಸಲ್ಲಿಕೆಯಾಗುತ್ತಿರುವ ಕಾರಣ ಸರ್ವರ್ ಸಮಸ್ಯೆ ಎದುರಾಗಿತ್ತು. ಇದರಿಂದ ಜನರು ಪಡಿತರ ಚೀಟಿ ತಿದ್ದುಪಡಿಗೆ ವಿವಿಧ ಕೇಂದ್ರಗಳನ್ನು ಸಂಪರ್ಕಿಸಿದರೂ ತಿದ್ದುಪಡಿ ಆಗುತ್ತಿರಲಿಲ್ಲ ಸಮಸ್ಯೆಯನ್ನು ಗಮನಿಸಿದ ಆಹಾರ ಇಲಾಖೆ ಸರ್ವರ್ ನಿಭಾಯಿಸಲು ಇದೀಗ ಜಿಲ್ಲಾವಾರು ದಿನಾಂಕವನ್ನು ನಿಗದಿಪಡಿಸಿದೆ.







