ಸೆ.27 ರಂದು ಬಸ್ರೂರಿನಲ್ಲಿ ರಕ್ತದಾನ ಶಿಬಿರ, ಉಚಿತ ಥೈರಾಯ್ಡ್ ಮತ್ತು ಇ.ಸಿ.ಜಿ ಪರೀಕ್ಷೆ ಉದ್ಘಾಟನಾ ಸಮಾರಂಭ
Views: 0
ಕನ್ನಡ ಕರಾವಳಿ ಸುದ್ದಿ: ರಜತ ಮಹೋತ್ಸವ ಸಮಿತಿ ಬಸ್ರೂರು ವಲಯ ಪದ್ಮಶಾಲಿ ಕ್ರಿಯಾ ವೇದಿಕೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿ, ಬ್ಲಡ್ ಸೆಂಟರ್ ಕುಂದಾಪುರ, ಲಯನ್ಸ್ ಕ್ಲಬ್ ಹಂಗಳೂರು, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬಸ್ರೂರು ಘಟಕ, ಆಟೋ ರಿಕ್ಷಾ ಚಾಲಕ ಮತ್ತು ಮಾಲಕರ ಸಂಘ ಬಸ್ರೂರು, ಬಸ್ರೂರು ಸ್ಪೋರ್ಟ್ಸ್ ಕ್ಲಬ್ (ರಿ.) ಬಸ್ರೂರು, ಮಹಿಷಮರ್ಧಿನಿ ಯುವಕ ಮಂಡಲ ಬಸ್ರೂರು ಇವರ ಸಹಯೋಗದೊಂದಿಗೆ ಸೆಪ್ಟೆಂಬರ್ 27 ರಂದು ಆದಿತ್ಯವಾರ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಬೆಳಿಗ್ಗೆ 9ಗಂಟೆಗೆ ರಕ್ತದಾನ ಶಿಬಿರ, ಉಚಿತ ಥೈರಾಯ್ಡ್ ಮತ್ತು ಇ.ಸಿ.ಜಿ ಪರೀಕ್ಷೆ ಉದ್ಘಾಟನಾ ಸಮಾರಂಭ ನಡೆಯಲಿದೆ.
ಕಾರ್ಯಕ್ರಮವನ್ನು ಕುಂದಾಪುರದ ಮಾನ್ಯ ಶಾಸಕರಾರ ಶ್ರೀ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಲಿದ್ದಾರೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ವೇದಿಕೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷ ಶ್ರೀ ಜಯಕರ ಶೆಟ್ಟಿ, ರಜತಮಹೋತ್ಸವ ಸಮಿತಿ ಪದ್ಮಶಾಲಿ ಕ್ರಿಯಾ ವೇದಿಕೆ ಬಸ್ರೂರು ಹಾಗೂ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಾರ್ಕೂರು ರಂಗನಕೇರಿ ಶ್ರೀನಿವಾಸ ಶೆಟ್ಟಿಗಾರ್, ಹಂಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀ ಹಂಸರಾಜ್ ಶೆಟ್ಟಿ, ಬಸ್ರೂರು ಪದ್ಮಶಾಲಿ ಕ್ರಿಯಾ ವೇದಿಕೆಯ ಅಧ್ಯಕ್ಷ ಶ್ರೀ ಚಂದ್ರಶೇಖರ್ ಶೆಟ್ಟಿಗಾರ್, ಬಸ್ರೂರು ರಿಕ್ಷಾ ಚಾಲಕ- ಮಾಲಕರ ಸಂಘದ ಅಧ್ಯಕ್ಷ ಶ್ರೀ ಅಶೋಕ್ ಕೆರೆಕಟ್ಟೆ ಬಸ್ರೂರು, ಮಹಿಷ ಮರ್ದಿನಿ ಯುವಕ ಮಂಡಲದ ಕಾರ್ಯದರ್ಶಿ ಶ್ರೀ ಮಹೇಶ್ ಮೆಂಡನ್, ಬಸ್ರೂರು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಶ್ರೀ ಸತ್ಯನಾರಾಯಣ ಶೆಟ್ಟಿಗಾರ್, ಬಸ್ರೂರು ಎ.ಬಿ.ವಿ.ಪಿ. ಘಟಕದ ಅಧ್ಯಕ್ಷ ಶ್ರೀ ಅಭಿಷೇಕ್ ಮಾರ್ಗೋಳಿ ಉಪಸ್ಥಿತರಿದ್ದಾರೆ.
ರಜತ ಮಹೋತ್ಸವ ಸಮಿತಿ, ಪದ್ಮಶಾಲಿ ಕ್ರಿಯಾ ವೇದಿಕೆ, ಬಸ್ರೂರು ಇದರ ಅಧ್ಯಕ್ಷರಾದ ಶ್ರೀ ರಾಜೇಂದ್ರ ಶೆಟ್ಟಿಗಾರ್ ಬಸ್ರೂರು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸುತ್ತಾ, ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನವನ್ನು ಪಡೆದುಕೂಳ್ಳುವಂತೆ ಕೋರಿಕೊಂಡಿದ್ದಾರೆ.







