ಶಿಕ್ಷಣ
ಸೆ.6ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ‘ಜನತಾ ರಸಬುಗ್ಗೆ ಮುದ್ದು ಕೃಷ್ಣ ಮುದ್ದು ರಾಧೆ’ ಸ್ಪರ್ಧೆ
Views: 8
ಕನ್ನಡ ಕರಾವಳಿ ಸುದ್ದಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕಿರಿಮಂಜೇಶ್ವರದ ಜನತಾ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ವತಿಯಿಂದ ‘ಜನತಾ ರಸಬುಗ್ಗೆ 3.0’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸೆಪ್ಟೆಂಬರ್ 6ರಂದು ಬೆಳಗ್ಗೆ 8.30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಡ್ರಾಮ ಜ್ಯುನಿಯರ್ ಖ್ಯಾತಿಯ ಅಸ್ಮಿತ್ ಎ. ಜೆ ಭಾಗವಹಿಸಲಿದ್ದಾರೆ.
‘ಮುದ್ದು ಕೃಷ್ಣ–ಮುದ್ದು ರಾಧೆ’ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಮಕ್ಕಳಿಗಾಗಿ ಸ್ಪರ್ಧೆಗಳು ನಡೆಯಲಿವೆ. ಸ್ಪರ್ಧೆಯಲ್ಲಿ 1 ವರ್ಷದಿಂದ 3 ವರ್ಷದೊಳಗಿನ ಮಕ್ಕಳಿಗೆ ಹಾಗೂ 3 ವರ್ಷ ಮೇಲ್ಪಟ್ಟು 6 ವರ್ಷದೊಳಗಿನ ಮಕ್ಕಳಿಗೆ ಅವಕಾಶ ಕಲ್ಪಿಸಲಾಗಿದೆ.
ಸ್ಪರ್ಧೆಯಲ್ಲಿ ವಿಜೇತರಾಗುವವರಿಗೆ ಆಕರ್ಷಕ ಬಹುಮಾನಗಳಿದ್ದು, ಪ್ರಥಮ ಬಹುಮಾನ ₹15,999, ದ್ವಿತೀಯ ₹13,999, ತೃತೀಯ ₹12,999,ಒಟ್ಟು 10 ನಗದು ಬಹುಮಾನಗಳು.ಹಾಗೂ 25 ಸಮಾಧಾನಕರ ಬಹುಮಾನಗಳನ್ನು ನೀಡಲಾಗುತ್ತದೆ.ಹಾಗೂ ಮಕ್ಕಳ ಪೋಷಕರಿಗೆ ಅದೃಷ್ಟ ಕೂಪನ್, ಚಿನ್ನ ಮತ್ತು ಬೆಳ್ಳಿಯ ನಾಣ್ಯ, 25 ಸಮಾಧಾನಕರ ಬಹುಮಾನಗಳು ಹಾಗೂ ಭಾಗವಹಿಸಿದ ಎಲ್ಲ ಸ್ಪರ್ಧಿಗಳಿಗೂ ಪದಕ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು.
ಸೆ.6ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ‘ಜನತಾ ರಸಬುಗ್ಗೆ ಮುದ್ದು ಕೃಷ್ಣ ಮುದ್ದು ರಾಧೆ’ ಸ್ಪರ್ಧೆ
ಸ್ಥಳ: ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್, ಕಿರಿಮಂಜೇಶ್ವರ.
ನೋಂದಣಿಗಾಗಿ: 8217532590, 7348978501






