ಜನಮನ

ಸೇತುವೆ ನಿರ್ಮಾಣ ಹಂತದಲ್ಲಿರುವ ವೇಳೆ ಕ್ರೇನ್ ಅವಘಡ :18 ಕಾರ್ಮಿಕರು ಮೃತ್ಯು

Views: 0

ಸೇತುವೆ ನಿರ್ಮಾಣ ಹಂತದಲ್ಲಿರುವ ವೇಳೆ ಕ್ರೇನ್ ಕುಸಿದು 18 ಕಾರ್ಮಿಕರು ಸಾವನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಪುಣೆ ಜಿಲ್ಲೆಯ ಸಮೃದ್ಧಿ ಎಕ್ಸ್ಪ್ರೆಸ್ ವೇ ನಲ್ಲಿ ಸೇತುವೆ ನಿರ್ಮಾಣ ಮಾಡುತ್ತಿದ್ದ ವೇಳೆ 100 ಅಡಿ ಎತ್ತರದಿಂದ ಕಾರ್ಮಿಕರ ಮೇಲೆ ಕ್ರೇನ್ ಕುಸಿದು ಬಿದ್ದಿದೆ. ಪರಿಣಾಮ 18 ಕಾರ್ಮಿಕರು ಸ್ಥಳದಲ್ಲಿ ಮೃತಪಟ್ಟಿದ್ದು ,ಹಲವರ ಸ್ಥಿತಿ ಚಿಂತಾ ಜನಕವಾಗಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಇತರ ತುರ್ತು ಸೇವಾ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ.ಅವಶೇಷಗಳ ನಡುವೆಯೇ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

Related Articles

Back to top button
error: Content is protected !!