ಇತರೆ

ಸ್ಕೂಟರ್‌ಗೆ ಕಾರು ಡಿಕ್ಕಿ:ಶಿರ್ವ ಠಾಣಾ ಎಎಸ್ಐ ಪುತ್ರಿ ಸಾವು

Views: 96

ಕನ್ನಡ ಕರಾವಳಿ ಸುದ್ದಿ: ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹ ಸವಾರೆಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ನಿಟ್ಟೂರು ಕೆಎಸ್‌ಆರ್‌ಟಿಸಿ ಡಿಪೋ ಬಳಿಯಲ್ಲಿ ಸಂಭವಿಸಿದೆ.

ಮೃತರನ್ನು ಶಿರ್ವ ಪೊಲೀಸ್ ಠಾಣಾ ಎಎಸ್ಐ ಸುದೇಶ್ ಶೆಟ್ಟಿ ಅವರ ಮಗಳು ಸ್ಪರ್ಷ (24) ಎಂದು ಗುರುತಿಸಲಾಗಿದೆ.ಮೃತರ ತಾಯಿ ಶರ್ಮಿಳಾ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರಾವಳಿ ಬೈಪಾಸ್ ಕಡೆಯಿಂದ ಸಂತೆಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು ಎದುರಿನಿಂದ ಹೋಗುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಇದರಿಂದ ಇಬ್ಬರು ಸವಾರರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದು, ಗಾಯಗೊಂಡ ಶರ್ಮಿಳಾ ಮತ್ತು ಸ್ಪರ್ಷ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಗಂಭೀರವಾಗಿ ಗಾಯಗೊಂಡ ಸ್ಪರ್ಷ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related Articles

Back to top button