ಇತರೆ

ಸ್ಕೂಟ‌ರ್ ಸವಾರನ ಮೇಲೆ ಕ್ರೇನ್ ಹರಿದು ಗಂಭೀರ ಗಾಯಗೊಂಡಿದ್ದ ಮಣೂರಿನ ಅಭಿಷೇಕ್ ಪೂಜಾರಿ ಸಾವು 

Views: 170

ಕನ್ನಡ ಕರಾವಳಿ ಸುದ್ದಿ: ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯಲ್ಲಿ ಅಕ್ಟೋಬರ್11ರಂದು ನಿಯಂತ್ರಣ ಕಳೆದುಕೊಂಡು ರಸ್ತೆಗೆ ಬಿದ್ದ ಸ್ಕೂಟ‌ರ್ ಸವಾರನ ಮೇಲೆ ಕ್ರೇನ್ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಣೂರಿನ ನಿವಾಸಿ ಅಭಿಷೇಕ್ ಪೂಜಾರಿ (23) ಅವರು ಚಿಕಿತ್ಸೆಗೆ ಸ್ಪಂದಿಸದೆ ಅಕ್ಟೋಬರ್13ರಂದು ಮೃತಪಟ್ಟಿದ್ದಾರೆ.

ಮೃತರು ತಂದೆ ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.

ಮಣೂರಿನ ಕಂಬಳಗದ್ದೆಬೆಟ್ಟು ನಿವಾಸಿ ಗೋಪಾಲ ಪೂಜಾರಿ  ವನಜಾ ದಂಪತಿಯ ಪುತ್ರನಾಗಿದ್ದು, ಕೋಟೇಶ್ವರದ ಅಂಶು ಮೆಡಿಕಲ್‌ನಲ್ಲಿ ಉದ್ಯೋಗಿಯಾಗಿದ್ದಾರೆ.

ಮಣೂರಿನಲ್ಲಿರುವ ತನ್ನ ಮನೆಯಿಂದ ಕೆಲಸದ ನಿಮಿತ್ತ ಕುಂದಾಪುರದ ಕಡೆಗೆ ಸ್ಕೂಟರ್‌ನಲ್ಲಿ ಸಾಗುತ್ತಿದ್ದ ಸಂದರ್ಭದಲ್ಲಿ ಪಲ್ಸ‌ರ್ ಸವಾರ ಏಕಾಏಕಿ ಅಡ್ಡಬಂದ ಪರಿಣಾಮ ಅಭಿಷೇಕ್ ರಸ್ತೆಗೆ ಬಿದ್ದಿದ್ದರು. ಹಿಂದಿನಿಂದ ವೇಗದಿಂದ ಬಂದ ಕ್ರೇನ್ ಹರಿದು ಗಂಭೀರ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

 

Related Articles

Back to top button