ಸ್ಥಳೀಯ ಸಂಸ್ಥೆ ಚುನಾವಣೆಗೆ ಸಜ್ಜಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Views: 39
ಕನ್ನಡ ಕರಾವಳಿ ಸುದ್ದಿ:ರಾಜ್ಯ ಕಾಂಗ್ರೆಸ್‌ನಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ‘ಡಿನ್ನರ್ ಮೀಟಿಂಗ್’ನಲ್ಲಿ ಬಿಹಾರ ಚುನಾವಣೆಯ ಚರ್ಚೆಗೆ ಪ್ರಾಮುಖ್ಯತೆ ಸಿಕ್ಕಿದ್ದು,ಸಂಪುಟ ಪುನಾರಚನೆ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದ್ದಾರೆ. ಈ ಬಗ್ಗೆ ಬಹಿರಂಗ ಚರ್ಚೆ ಸಲ್ಲ ಎನ್ನುವ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ನಡೆದ ಡಿನ್ನರ್ ಮೀಟಿಂಗ್‌ನಲ್ಲಿ ಭೋಸರಾಜ್ ಹೊರತುಪಡಿಸಿ ಬಹುತೇಕ ಸಚಿವರು ಭಾಗವಹಿಸಿದ್ದರು. ವಿದೇಶ ಪ್ರವಾಸ ಮಾಡಬೇಕಿದ್ದ ಕಾರಣ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೆಲ ಕಾಲವಿದ್ದು ತೆರಳಿದ್ದಾರೆ. ಇನ್ನುಳಿದಂತೆ ಇಡೀ ದಿನ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಡಿನ್ನರ್ ಸಭೆಯಲ್ಲಿ ಭಾಗಿಯಾಗಿದ್ದರು.
ಸ್ಥಳೀಯ ಸಂಸ್ಥೆ ಚುನಾವಣೆಗೆ ಸಜ್ಜಾಗಲು ಸೂಚನೆ
ಬಿಹಾರ ಚುನಾವಣೆ ಬಳಿಕ ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳು ಎದುರಾಗಬಹುದು. ಆದ್ದರಿಂದ ಆ ಚುನಾ ವಣೆಯ ಬಗ್ಗೆಯೂ ಈಗಿನಿಂದಲೇ ಸಿದ್ಧತೆ ಮಾಡಿ ಕೊಳ್ಳಬೇಕು. ಉಸ್ತುವಾರಿ ಜಿಲ್ಲೆಗಳಲ್ಲಿ, ಸ್ಥಳೀಯ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಸಭೆಯಲ್ಲಿ ಸೂಚನೆ ನೀಡಲಾಗಿದೆ.ಈಗಿನಿಂದಲೇ ಇದಕ್ಕೆ ಸಜ್ಜಾಗಿರಬೇಕು. ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಿ ಎಂದರು.