ಇತರೆ

ಸ್ನಾನದ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವತಿ!

Views: 87

ಕನ್ನಡ ಕರಾವಳಿ ಸುದ್ದಿ: ಯುವತಿಯೊಬ್ಬಳು ತನ್ನ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

22 ವರ್ಷದ ಯಶಸ್ವಿನಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಆಕೆ ಕಳೆದ ಐದು ತಿಂಗಳಿಂದ ದೊಡ್ಡಬಳ್ಳಾಪುರದಲ್ಲಿರುವ ಆ್ಯಪಲ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಳು. ಮನೆಯಿಂದ ಹೊರಗೆ ಇರುವ ಸ್ನಾನದ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ಬೆಂಕಿ ತೀವ್ರವಾಗಿ ಹೊತ್ತಿಕೊಂಡಿದ್ದರಿಂದ ಅವರು ಗಂಭೀರವಾಗಿ ಸುಟ್ಟು ಗಾಯಗೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಘಟನೆಗೆ ಮುಂಚಿತವಾಗಿ ದಾಬಸ್ ಪೇಟೆಯ ಪೆಟ್ರೋಲ್‌ ಬಂಕ್‌ನಲ್ಲಿ ಪೆಟ್ರೋಲ್ ಖರೀದಿಸಿದ್ದು, ಪೆಟ್ರೋಲ್ ಖರೀದಿಸಿದ ದೃಶ್ಯಗಳು ಅಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆದರೆ, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!