ಇತರೆ

ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದ ವೇಳೆ ಪೊಲೀಸರ ಭಯದಿಂದ ಬಾಲ್ಕನಿಯಿಂದ ಹಾರಿದ ಯುವತಿ ಗಂಭೀರ

Views: 129

ಕನ್ನಡ ಕರಾವಳಿ ಸುದ್ದಿ: ಪಾರ್ಟಿ ಮಾಡುತ್ತಿದ್ದ ಯುವಕ-ಯುವತಿಯರಿಂದ ಪೊಲೀಸರು ಹಣ ಕೇಳಿದ ಕಾರಣ ಭಯಗೊಂಡ ಓರ್ವ ಯುವತಿ ಹೋಟೆಲ್ ಬಾಲ್ಕನಿಯಿಂದ ಕೆಳಗೆ ಹಾರಿರುವ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ

ಕುಂದಲಹಳ್ಳಿ ನಿವಾಸಿ, ವೈಷ್ಣವಿ(21) ಎಂದು ಗುರುತಿಸಲಾಗಿದೆ.

ವೈಷ್ಣವಿ ಸ್ನೇಹಿತರೊಂದಿಗೆ ಶನಿವಾರ(ಡಿ.13) ರಾತ್ರಿ ಎಚ್‌ಎಎಲ್ ಎಇಸಿಎಸ್‌ ಲೇಔಟ್‌ನಲ್ಲಿರುವ ಹೋಟೆಲ್‌ಗೆ ಪಾರ್ಟಿಗಾಗಿ ತೆರಳಿದ್ದಳು. ಎಂಟು ಸ್ನೇಹಿತರು ಸೇರಿ ಮೂರು ರೂಮ್‌ಗಳನ್ನು ಬುಕ್ ಮಾಡಿಕೊಂಡು ಹಾಡು ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿದ್ದರು. ಆ ವೇಳೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಕೆಲವೇ ಸಮಯದಲ್ಲಿ ಹೊಯ್ಸಳ ಪೊಲೀಸರು ಹೋಟೆಲ್‌ಗೆ ಆಗಮಿಸಿದ್ದು, ವಿಚಾರ ತಿಳಿದ ತಕ್ಷಣ ವೈಷ್ಣವಿ ಭಯದಿಂದ ಬಾಲ್ಕನಿಯಿಂದ ಹೊರಗೆ ಹಾರಿದ್ದಾಳೆ ಎಂದು ಹೇಳಲಾಗಿದೆ. ಕೆಳಗೆ ಬಿದ್ದ ವೇಳೆ ಕಬ್ಬಿಣದ ಗ್ರಿಲ್‌ಗೆ ತಾಗಿ ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣ ಯುವತಿಯನ್ನು ಆಸ್ಪತ್ರೆ ದಾಖಲಿಸಲಾಗಿದೆ.

ಘಟನೆ ಕುರಿತು ಹೆಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.

Related Articles

Back to top button
error: Content is protected !!