ರಾಜಕೀಯ

ಸ್ಪರ್ಧೆಯಿಂದ ಹಿಂದೆ ಸರಿಯೆನು, ನನಗೆ ಯಾವುದೇ ನೋಟಿಸ್‌ ಬಂದಿಲ್ಲ :ರಘುಪತಿ ಭಟ್‌

Views: 47

ಉಡುಪಿ: ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ನನಗೆ ಪಕ್ಷದ ಶಿಸ್ತು ಉಲ್ಲಂಘನೆಯ ಬಗ್ಗೆ ನನಗೆ ನೋಟಿಸ್‌ ತಲುಪಿಲ್ಲ. ತಲುಪಿದ ಕೂಡಲೇ ತಕ್ಕ ಉತ್ತರಿಸುವೆ ಪಕ್ಷದಿಂದ ಉಚ್ಚಾಟನೆ ಮಾಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್‌ ಹೇಳಿದರು.

ಶಿಸ್ತು  ಉಲ್ಲಂಘನೆ ಕುರಿತು ಬಿಜೆಪಿ ರಾಜ್ಯ ಶಿಸ್ತು ಸಮಿತಿ ನೀಡಿದ್ದ ನೋಟಿಸ್‌ ಸಂಬಂಧ ಪ್ರತಿಕ್ರಿಯೆ ನೀಡಿ, ಪಕ್ಷದಿಂದ ಆಗಿರುವ ತಪ್ಪುಗಳು ಏನೇನು ಮತ್ತು ಸಾಮಾನ್ಯ ಕಾರ್ಯಕರ್ತನೊಬ್ಬನನ್ನು ಹೇಗೆ ನಡೆಸಿಕೊಂಡಿದೆ ಎಂಬುದನ್ನು ತಿಳಿಸುತ್ತೇನೆ ಎಂದ ಅವರು, ಸ್ಪರ್ಧೆಯಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದರು.

ಚುನಾವಣೆ ಸಂಬಂಧ ಈಗಾಗಲೇ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಚಾರ ಆರಂಭಿಸಿದ್ದು ಪದವೀಧರ ಮತದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದರು.

Related Articles

Back to top button
error: Content is protected !!