ಜನಮನ

ಸ್ಪಾ ಮಾಲೀಕರಿಗೆ ಬ್ಲ್ಯಾಕ್ ಮೇಲ್: ಖಾಸಗಿ ಸುದ್ದಿ ವಾಹಿನಿ ನಿರೂಪಕಿ ನಾಪತ್ತೆ!

Views: 148

ಖಾಸಗಿ ಸುದ್ದಿ ವಾಹಿನಿ ನಿರೂಪಕಿ ಸುಲಿಗೆ ಆರೋಪವನ್ನು ಎದುರಿಸುತ್ತಿರುವ ಅವರು  ನಾಪತ್ತೆಯಾಗಿದ್ದಾರೆ.

ಇಂದಿರಾನಗರ ಸ್ಪಾ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರೂಪಾಯಿ ಹಣ ಸುಲಿಗೆಗೆ ಯತ್ನಿಸಿದ್ದರು .ಈ ಬೆದರಿಕೆ ಸಹಿಸಲಾರದೆ ಸ್ಪಾ ವ್ಯವಸ್ಥಾಪಕ, ಜೆ.ಬಿ.ನಗರ ಠಾಣೆಗೆ ದೂರು ನೀಡಿದ್ದರು. ಇನ್ನು ಪ್ರಕರಣ ಸಂಬಂಧ ಖಾಸಗಿ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸೇರಿ ಇಬ್ಬರನ್ನು ಜಿ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ.

ಸುದ್ದಿವಾಹಿನಿಯ ಸಿಇಒ ರಾಜಾನುಕುಂಟೆ ವೆಂಕಟೇಶ್‌ ಹಾಗೂ ನಿರೂಪಕಿ ದಿವ್ಯಾ ವಸಂತಾ ಸೋದರ ಸಂದೇಶ್‌ ಬಂಧಿತರಾಗಿದ್ದು, ಆರೋಪಿಗಳಿಂದ 3 ಮೊಬೈಲ್ ಜಪ್ತಿ ಮಾಡಲಾಗಿದೆ.

ಖಾಸಗಿ ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿದ್ದ ದಿವ್ಯಾ, ಒಂದು ತಿಂಗಳ ಹಿಂದಷ್ಟೇ ಕೆಲಸ ಬಿಟ್ಟಿದ್ದಳು. ಖಾಸಗಿ ಸುದ್ದಿವಾಹಿನಿಯಲ್ಲಿ ಪ್ರತಿ ತಿಂಗಳು 15 ರಿಂದ 20 ಸಾವಿರ ಸಂಬಳ ಪಡೆಯುತ್ತಿದ್ದರೆ ಮನರಂಜನಾ ವಾಹಿನಿ ಯಲ್ಲಿ ಹಾಸ್ಯ ಕಾರ್ಯಕ್ರಮದಲ್ಲಿ ನಟಿಸುತ್ತಿದ್ದ ಆಕೆಗೆ ವಾರಕ್ಕೆ 6 ರಿಂದ 7 ಸಾವಿರ ರುಪಾಯಿ ಸಂಭಾವನೆ ಸಿಗುತ್ತಿತ್ತು.

ಐಷಾರಾಮಿ ಜೀವನಕ್ಕೆ ಮಾರುಹೋಗಿದ್ದ ದಿವ್ಯಾ ವಸಂತ್ ಸುಲಭವಾಗಿ ಹಣ ಸಂಪಾದಿಸಲು ಅಡ್ಡ ಮಾರ್ಗ ತುಳಿದು ಸಂಕಷ್ಟಕ್ಕೆ ಸಿಲುಕ್ಕಿದ್ದಾಳೆ.

ಪ್ರಕರಣ ಸಂಬಂಧ ಲಗ್ಗೆರೆಯಲ್ಲಿರುವ ದಿವ್ಯಾ ಮನೆ ಮೇಲೆ ಪೊಲೀಸರು ದಾಳಿ ನಡೆಸಿ, ಕೆಲ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. ಬಂಧನ ಭೀತಿಗೊಳಗಾದ ದಿವ್ಯಾ, ಮನೆಯಲ್ಲಿದ್ದ ಕ್ಯಾಮೆ ರಾ, ಲ್ಯಾಪ್‌ಟಾಪ್ ಸೇರಿ ಕೆಲ ವಸ್ತುಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾಳೆ ಎಂದು ತಿಳಿದುಬಂದಿದೆ.

ಸಂತ್ರಸ್ತರಿಂದ 80 ಸಾವಿರ, 50 ಸಾವಿರ ಹಾಗೂ 1 ಲಕ್ಷ ರೂಪಾಯಿ ವರೆಗೆ ಆನ್‌ಲೈನ್‌ ಮೂಲಕ ತಮ್ಮ ಖಾತೆಗಳಿಗೆ ವೆಂಕಟೇಶ್‌ ಹಾಗೂ ದಿವ್ಯಾ ಹಣ ವರ್ಗಾಯಿಸಿಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

Related Articles

Back to top button
error: Content is protected !!