ಸಾಂಸ್ಕೃತಿಕ

ಸ್ಯಾಂಡಲ್‌ವುಡ್‌ ಮೋಹಕ ತಾರೆ ರಮ್ಯಾಗೆ ಮದುವೆ ಫಿಕ್ಸ್‌?..ಹುಡುಗ ಯಾರು?

Views: 246

ಬೆಂಗಳೂರು, ಸ್ಯಾಂಡಲ್‌ವುಡ್ ಮೋಹಕ ತಾರೆಗೆ ರಮ್ಯಾಗೆ ಕೊನೆಗೂ ಕಂಕಣ ಭಾಗ್ಯ ಕೂಡಿ ಬಂದಿದೆ. ನಟಿ ರಮ್ಯಾ ಅವರು ಇದೇ ನವೆಂಬರ್ ತಿಂಗಳಲ್ಲಿ ಹಸೆಮಣೆ ಏರುವ ಸಿದ್ಧತೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸ್ಯಾಂಡಲ್‌ವುಡ್‌ ಕ್ವೀನ್ ರಮ್ಯಾ ಅವರ ಮದುವೆ ಕುರಿತು ಸಾಕಷ್ಟು ಪ್ರಶ್ನೆಗಳು ಹುಟ್ಟಿಕೊಂಡಿದ್ದು, ರಮ್ಯಾ ಅವರ ಅಭಿಮಾನಿಗಳು ಸಾಕಷ್ಟು ಭಾರೀ ರಮ್ಯಾ ಅವರ ಬಳಿ ಮದುವೆ ಯಾವಾಗ ಎನ್ನುವ ಪ್ರಶ್ನೆಯನ್ನು ಮುಂದಿಟ್ಟಿದ್ದು, ಕೊನೆಗೂ ನಟಿ ರಮ್ಯಾ ಅವರು ತಮ್ಮ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ನೀಡಲಿದ್ದಾರೆ ಎನ್ನಲಾಗಿದೆ.

ಸ್ಯಾಂಡಲ್‌ವುಡ್‌ ಮೋಹಕ ತಾರೆ ಕುರಿತು ಆಪ್ತರು ಹೇಳುವಂತೆ ಅಕ್ಟೋಬರ್ ನಲ್ಲಿ ಎಂಗೇಜ್ಮೆಂಟ್ ಅಗಲಿದ್ದಾರೆ ನವಂಬರ್ ನಲ್ಲಿ ಬೆಂಗಳೂರು ಅರಮನೆಯಲ್ಲಿ ಮದುವೆಯಾಗಲಿದ್ದಾರೆ. ರಾಜಸ್ಥಾನದಲ್ಲಿ ಆರತಕ್ಷತೆ ನಡೆಯಲಿದೆ ಎಂದು ತಿಳಿದು ಬಂದಿದೆ.

ನಟಿ ರಮ್ಯಾ ಅವರು ಉದ್ಯಮಿಯೊಬ್ಬರನ್ನು ಕೈ ಹಿಡಿಯಲಿದ್ದಾರೆ. ಆ ಉದ್ಯಮಿ ಯಾರು ಅನ್ನೋ ಗುಟ್ಟನ್ನು ಇನ್ನೂ ಬಿಟ್ಟು ಕೊಟ್ಟಿಲ್ಲ.ಆದರೆ, ಸದ್ಯದ ಮಾಹಿತಿ ಪ್ರಕಾರ ಚೌಧರಿ ಗಾರ್ಮೆಂಟ್ಸ್ ಮಾಲೀಕ ಪ್ರಭವ್ ಚೌಧರಿ ಅವರನ್ನು ರಮ್ಯಾ ವಿವಾಹ ಆಗಲಿದ್ದಾರೆ ಎನ್ನಲಾಗಿದೆ.

ರಮ್ಯಾ ಅವರು ಕೇವಲ ಸಿನಿಮಾ ರಂಗದಲ್ಲಿ ಅಷ್ಟೇ ಅಲ್ಲ ರಾಜಕೀಯದಲ್ಲೂ ಸಕ್ರಿಯರಾಗಿದ್ದಾರೆ. 2013ರಲ್ಲಿ ರಮ್ಯಾ ಮಂಡ್ಯದಲ್ಲಿ ನಡೆದ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಪರವಾಗಿ ನಟಿ ರಮ್ಯ ಅಬ್ಬರದ ಪ್ರಚಾರವನ್ನು ನಡೆಸಿದ್ದರು.ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಇದೀಗ , ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ನಡೆಯಲಿದ್ದು, ಕೈ ಅಭ್ಯರ್ಥಿಯಾಗಿ ನಟಿ ರಮ್ಯಾ ಸರ್ಧೆ ನಡೆಸುತ್ತಾರೆ ಎಂಬ ಮಾತು ಕೇಳಿ ಬಂದಿದೆ. ಆದರೆ, ಇದುವರೆಗೂ ಈ ಬಗ್ಗೆ ಕಾಂಗ್ರೆಸ್‌ ನಿಂದ ಯಾವುದೇ ಸ್ಪಷ್ಟನೆ ಇಲ್ಲ.

ಇನ್ನೂ ಮಾಜಿ ಸಂಸದೆ ಹಾಗೂ ಸ್ಯಾಂಡಲ್‌ವುಡ್ ಮೋಹಕ ತಾರೆ ರಮ್ಯಾ ಅವರಿಗೆ ಈಗ 41 ವರ್ಷ ವಯಸ್ಸು. ಪುನೀತ್ ರಾಜ್‌ಕುಮಾರ್ ಅಭಿನಯದ ಅಭಿ ಚಿತ್ರದ ಮೂಲಕ 2003ರಲ್ಲಿ ರಮ್ಯಾ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಸುಮಾರು 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ರಮ್ಯಾ ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲೂ ಮಿಂಚಿದ್ದಾರೆ.

Related Articles

Back to top button
error: Content is protected !!