ಇತರೆ

ಸ್ವಿಮ್ಮಿಂಗ್ ಪೂಲ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

Views: 32

ಕನ್ನಡ ಕರಾವಳಿ ಸುದ್ದಿ: ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಮಹಿಳೆಯೊಬ್ಬರ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಕನಕಪುರ ತಾಲೂಕಿನ ಬೆಟ್ಟೆಗೌಡನಪಾಳ್ಯದಲ್ಲಿನ ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಮಹಿಳೆ ಶವ ಪತ್ತೆಯಾಗಿದೆ.‌ ಮೃತ ಮಹಿಳೆಯನ್ನು ಪ್ರತಿಭಾ (29) ಎಂದು ಗುರುತಿಸಲಾಗಿದೆ. ಪ್ರತಿಭಾ ತನ್ನ ಪತಿ ಬಾಬು ಜೊತೆ ಗ್ರಾಮದ ಹೊರವಲಯದಲ್ಲಿರುವ ತೋಟದ ಮನೆಯಲ್ಲಿ ವಾಸವಾಗಿದ್ದಳು. ಪ್ರತಿಭಾ ಬಾಬುಗೆ ಎರಡನೇ ಪತ್ನಿಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ ಎನ್ನಲಾಗಿದೆ.

ಕೌಟುಂಬಿಕ ಕಲಹದ ಹಿನ್ನೆಲೆ ಪತಿ ಬಾಬು ಕೊಲೆ ನಡೆಸಿದ್ದಾನೆ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಮಾಹಿತಿ ಪಡೆದ ಕೋಡಿಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪತಿ ಬಾಬುವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರತಿಭಾ ಕುಟುಂಬಸ್ಥರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Articles

Back to top button
error: Content is protected !!