ಹಣದ ಆಮಿಷವೊಡ್ಡಿ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಬೃಹತ್ ಜಾಲ ಬಯಲಿಗೆ: ಅಕ್ಕ ಪಡೆಯಿಂದ ಬೃಹತ್ ಕಾರ್ಯಾಚರಣೆ
Views: 65
ಕನ್ನಡ ಕರಾವಳಿ ಸುದ್ದಿ: ಹಣದ ಆಮಿಷವೊಡ್ಡಿ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಜಾಲವೊಂದನ್ನು ಬಳ್ಳಾರಿ ಪೊಲೀಸರು ರಹಸ್ಯ ಕಾರ್ಯಾಚರಣೆಯ ಮೂಲಕ ಪತ್ತೆ ಹಚ್ಚಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿಯನ್ನು ಬಂಧಿಸಿದ್ದಾರೆ. ಇನ್ನುಳಿದ ಐವರ ಪತ್ತೆಗೆ ಶೋಧ ಕಾರ್ಯ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದಲ್ಲಿ16 ಮಂದಿಯನ್ನು ಆರೋಪಿಗಳೆಂದು ಗುರುತಿಸಲಾಗಿದೆ.
ಈ ಪೈಕಿ ಹನ್ನೊಂದು ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು, ಉಳಿದ ಐವರಿಗಾಗಿ ಶೋಧ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಮಾಹಿತಿ ನೀಡಿದ್ದಾರೆ.
ಬಳ್ಳಾರಿ ನಗರದ ಮಿಲ್ಲರ್‌ಪೇಟೆಯಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಗೋವಿಂದಮ್ಮ ಎಂಬಾಕೆ ಸೇರಿದಂತೆ ಒಟ್ಟು 16 ಮಂದಿ ಸೇರಿಕೊಂಡು ಅಕ್ರಮವಾಗಿ ಹಣ ಸಂಪಾದಿಸುವ ಉದ್ದೇಶದಿಂದ ಬಡ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರಿಗೆ ಹಣದ ಆಮಿಷವೊಡ್ಡಿ, ವೇಶ್ಯಾವಾಟಿಕೆಗೆ ತಳ್ಳುವ ಜಾಲ ನಡೆಸುತ್ತಿದ್ದರು.ಬಳ್ಳಾರಿ, ಚಿಕ್ಕಮಗಳೂರು, ಮೈಸೂರು ಮತ್ತು ಆಂಧ್ರದ ಅನಂತಪುರದಲ್ಲಿ ಈ ಗ್ಯಾಂಗ್ ಸಕ್ರಿಯವಾಗಿರುವ ಮಾಹಿತಿ ಕೂಡ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 243/2026ರ ಅಡಿಯಲ್ಲಿ ಬಿಎನ್‌ಎಸ್, ಐಟಿಪಿ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.






