ಜನಮನ
‘ಹರ್ ಘರ್ ತಿರಂಗಾ’ ಪ್ರೊಫೈಲ್ ಚಿತ್ರ ರಾಷ್ಟ್ರಧ್ವಜವಾಗಿ ಬದಲಿಸಲು ಪ್ರಧಾನಿ ಕರೆ

Views: 2
ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದಾದ್ಯಂತ ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಚಿತ್ರವನ್ನು (ಡಿಪಿ) ತ್ರಿವರ್ಣ ಧ್ವಜವಾಗಿ ಬದಲಾಯಿಸಲು ಪ್ರಧಾನ ಮಂತ್ರಿ ಮೋದಿ ದೇಶದ ಜನತೆಗೆ ವಿನಂತಿ ಮಾಡಿದ್ದಾರೆ.
ಈ ಮೂಲಕ ದೇಶ ಮತ್ತು ನಮ್ಮ ನಡುವಿನ ಬಾಂಧವ್ಯ ಮತ್ತಷ್ಟು ಗಾಢವಾಗಲಿದೆ ಎಂದು ಹೇಳಿದ್ದಾರೆ.
ಈ ಮೊದಲು ತಿರಂಗ ಜೊತೆ ಫೋಟೋ ತೆಗೆದು ‘ಹರ್ ಘರ್ ತಿರಂಗಾ’ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಲು ಪ್ರಧಾನಿ ಕರೆ ನೀಡಿದ್ದರು.
‘ಹರ್ ಘರ್ ತಿರಂಗಾ’ ಅಭಿಯಾನವು ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಹೊಸ ಚೈತನ್ಯ ನೀಡಲಿದೆ ದೇಶವಾಸಿಗಳು ಈ ಅಭಿಯಾನವನ್ನು ಈ ವರ್ಷ ಹೊಸ ಎತ್ತರಕ್ಕೆ ಕೊಂಡೆಯ್ಯ ಬೇಕು.
ಅಗಸ್ಟ್ 13 ರಿಂದ 15 ರ ನಡುವೆ ದೇಶದ ಹೆಮ್ಮೆಯ ಸಂಕೇತವಾದ ರಾಷ್ಟ್ರ ಧ್ವಜವನ್ನು ಹಾರಿಸಿ ರಾಷ್ಟ್ರಧ್ವಜದೊಂದಿಗೆ ನಿಮ್ಮ ಫೋಟೋಗಳನ್ನು ಅಪ್ಲೋಡ್ ಮಾಡಿ ಎಂದು ಮನವಿ ಮಾಡಿದರು.






