ಜನಮನ
ಹವಾಮಾನ ಮುನ್ಸೂಚನೆ : ಬೀಸಲಿದೆ ಬಿಸಿಗಾಳಿ

Views: 1
ಕನಾ೯ಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಬಲವಾದ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ಈ ಅವಧಿಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮೀರುವ ಸಾಧ್ಯತೆಗಳಿದ್ದು, ಜನರ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವಿಶೇಷ ನಿಗಾ ವಹಿಸಲು ಸೂಚನೆ ನೀಡಲಾಗಿದೆ.
ಮುಂದಿನ 48 ಗಂಟೆಗಳಲ್ಲಿ ಕನಾ೯ಟಕ ಕರಾವಳಿಯ ಕೆಲವು ಕಡೆಗಳಲ್ಲಿ ಬಸಿ ಗಾಳಿಯ ವಾತಾವರಣ ಬರಲಿದೆ ಹಾಗೂ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ದ. ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ತೀವೃ ಬಿಸಿಲಿನ ವಾತಾವರಣ ಇದ್ದು. ಬಲವಾದ ತಾಪಮಾನದಿಂದ ಹಿಟ್ ಸ್ಟೋಕ್, ಕಣ್ಣಿನ ಉರಿ ತಲೆಸುತ್ತು ಸಹಿತ ನಾನಾ ಆರೋಗ್ಯ ಸಮಸ್ಯೆಗಳು ತಲೆದೊರುವ ಅಪಾಯವಿದೆ.






