ಇತರೆ

ಹಾಡಹಗಲೇ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗುವಿನ ಸರ ಕದ್ದು ಪರಾರಿ 

Views: 44

ಕನ್ನಡ ಕರಾವಳಿ ಸುದ್ದಿ: ಮನೆಯ ಪರಿಸರದಲ್ಲಿ ನಿಶ್ಚಿಂತೆಯಿಂದ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಿಂದ ಚಿನ್ನದ ಸರವನ್ನು ಕಸಿದು ಬೈಕ್ ಸವಾರನೋರ್ವ ಪರಾರಿಯಾಗಿರುವ ಆಘಾತಕಾರಿ ಘಟನೆ ವಿಟ್ಲ ಪಡೂರು ಗ್ರಾಮದ ಕೋಡಪದವು ಮದಕ ಎಂಬಲ್ಲಿ ನಡೆದಿದೆ.

ಘಟನೆಯ ವಿವರ: ಹೆಲ್ಮೆಟ್ ಧರಿಸಿ ಕೆಟಿಎಂ ಬೈಕಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ, ಮಗು ಆಟವಾಡುತ್ತಿದ್ದ ಜಾಗಕ್ಕೆ ಬಂದು ಕ್ಷಣಾರ್ಧದಲ್ಲಿ ಮಗುವಿನ ಕುತ್ತಿಗೆಯಲ್ಲಿದ್ದ ಸರವನ್ನು ಎಗರಿಸಿ ಪರಾರಿಯಾಗಿದ್ದಾನೆ. ಈ ಇಡೀ ಕೃತ್ಯವು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಆರೋಪಿ ಪತ್ತೆಗೆ ಆಗ್ರಹ:ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಳ್ಳನ ಚಲನವಲನಗಳು ದಾಖಲಾಗಿದ್ದು, ವಿಟ್ಲ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಹಾಡಹಗಲೇ ನಡೆದ ಈ ಘಟನೆಯಿಂದ ಪೋಷಕರು ಮತ್ತು ಗ್ರಾಮಸ್ಥರು ಆತಂಕಕ್ಕೀಡಾಗಿದ್ದು. ಪೊಲೀಸರು ಶೀಘ್ರವಾಗಿ ಆರೋಪಿಯನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related Articles

Back to top button
error: Content is protected !!