ರಾಜಕೀಯ

ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ :ಸಂಸದ ಪ್ರಜ್ವಲ್, ಹೆಚ್.ಡಿ ರೇವಣ್ಣ ವಿಚಾರಣೆಗೆ  ನೋಟಿಸ್! 

Views: 129

ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣ ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ನ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಎಸ್ಐಟಿಯಿಂದ ತನಿಖೆ ನಡೆದಿದೆ. ಇದೀಗ ಈ ಕೇಸ್ ಸಂಬಂಧ ಹೆಚ್.ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಬಿಗ್‌ ಶಾಕ್‌ ನೀಡಿದ್ದಾರೆ.

ಹಾಸನ ಅಶ್ಲೀಲ ವಿಡಿಯೋ ಕೇಸ್ ನಲ್ಲಿ ಗುರುತು ಪತ್ತೆಯಾದ ಸಂತ್ರಸ್ತೆಯರನ್ನು ಎಸ್ಐಟಿ ತಂಡವು ಸಿಐಡಿ ಕಚೇರಿಗೆ ಕರೆಸಿದ್ದರು. ಇದೇ ವೇಳೆ ಎಸ್ಪಿ ಸೀಮಾ ಲಾಟ್ಕರ್ ಮುಂದೆ ಸಂತ್ರಸ್ತೆಯರು ಮಾಹಿತಿ ನೀಡಿದ್ದಾರೆ. ಇಂದು ಕೂಡ ಸಂಸದ ಪ್ರಜ್ವಲ್ ರೇವಣ್ಣ ಅವರ ಬಳಿ ಕಾರು ಚಾಲಕ ಕಾರ್ತಿಕ್ ಎಸ್‌ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಈ ಎಲ್ಲಾ ದಾಖಲೆಯನ್ನು ಪಡೆದುಕೊಂಡ ಎಸ್‌ಐಟಿ ತಂಡ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಹೆಚ್.ಡಿ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

Related Articles

Back to top button
error: Content is protected !!