ಹಾಸನ ಭೀಕರ ಅಪಘಾತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ

Views: 63
ಕನ್ನಡ ಕರಾವಳಿ ಸುದ್ದಿ: ಹಾಸನದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಹಾಸನದ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ತಡರಾತ್ರಿ ಕ್ಯಾಂಟರ್ ಹರಿದ ಪರಿಣಾಮ 9 ಜನರು ಸಾವನ್ನಪ್ಪಿದ್ದರು. 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಅವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿತ್ತು.
ಇದೀಗ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೋರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಅಪಘಾತದಲ್ಲಿ ಸಾವಿನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಶಿವಯ್ಯನ ಕೊಪ್ಪಲು ಗ್ರಾಮದ ವಿದ್ಯಾರ್ಥಿ ಚಂದನ್ (26) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಗಂಭೀರ ಸ್ಥಿತಿಯಲ್ಲಿ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ. ದುರಾದೃಷ್ಟವಶಾತ್ ಟ್ರಕ್ ಹರಿದಿದ್ದರಿಂದ ಚಂದನ್ ಬ್ರೇನ್ ಡೆಡ್ ಸ್ಥಿತಿಯಲ್ಲಿತ್ತು. ಹೀಗಾಗಿ ಚಂದನ್ ನನ್ನು ಬದುಕಿ ಉಳಿಸುವ ವೈದ್ಯರ ಪ್ರಯತ್ನಗಳೆಲ್ಲಾ ವಿಫಲವಾದವು.