ಇತರೆ

ಹಾಸ್ಟೆಲ್‌ನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆತ್ಮಹತ್ಯೆ: ಅನುಮಾನಾಸ್ಪದ ಸಾವು! ಕಾಲೇಜ್ ವಿರುದ್ಧ ಪೋಷಕರ ದೂರು

Views: 79

ಕನ್ನಡ ಕರಾವಳಿ ಸುದ್ದಿ:ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದಿದ್ದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ ಆಗಿರುವಂತಹ ಘಟನೆ ಜಿಲ್ಲೆಯ ಮುಂಡರಗಿ ಪಟ್ಟಣದ ಎಸ್‌ಬಿಎಸ್ ಆಯುರ್ವೇದಿಕ್‌ ಮೆಡಿಕಲ್ ಕಾಲೇಜ್ ಹಾಸ್ಟೆಲ್ ನಲ್ಲಿ ನಡೆದಿದೆ.

BAMS ಅಂತಿಮ ವರ್ಷದಲ್ಲಿ ಓದುತ್ತಿದ್ದ ಈಶ್ವರ ಗಾದಗೆ(21) ಮೃತ ವಿದ್ಯಾರ್ಥಿ. ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಕುಟುಂಬಸ್ಥರು ಆಡಳಿತ ಮಂಡಳಿ, ಸಿಬ್ಬಂದಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕುಟುಂಬಸ್ಥರಿಗೆ ಮಾಹಿತಿ ನೀಡದೇ ಆಸ್ಪತ್ರೆಗೆ ಮೃತದೇಹವನ್ನು ಸಾಗಾಟ ಮಾಡಿದ್ದಾರೆ.

ಮೃತ ವಿದ್ಯಾರ್ಥಿ ಈಶ್ವರ ಗಾದಗೆ ಬೀದ‌ರ್ ಜಿಲ್ಲೆಯ ಬಾಲ್ಕಿ ತಾಲೂಕಿನ ಧನ್ನೂರ ಎಸ್ ಗ್ರಾಮದವರು. ಎಸ್‌ಬಿಎಸ್‌ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ನಲ್ಲಿ BAMS ಅಂತಿಮ ವರ್ಷದಲ್ಲಿ ಓದುತ್ತಿದ್ದರು. ಆರು ತಿಂಗಳ ಹಿಂದೆ ಕೂಡ ಕಾಲೇಜ್ ಉಪನ್ಯಾಸಕ ಕಿರುಕುಳ ತಾಳಲಾರದೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಇನ್ನು ಎರಡು ಲೈನ್ ಇರುವ ಡೆತ್ ನೋಟ್ ಪತ್ತೆ ಆಗಿದೆ. ‘ನನ್ನ ಸಾವಿಗೆ ಯಾರೂ ಕಾರಣ ಅಲ್ಲ, ನಾನೇ ಕಾರಣ. ಸಾರಿ ಮಮ್ಮಿ ಪಪ್ಪಾ’ ಅಂತ ಬರೆಯಲಾಗಿದೆ. ಆದರೆ ಇದು ನಮ್ಮ ಮಗ ಬರೆದ ಡೆತ್ ನೋಟ್ ಅಲ್ಲ, ನಮ್ಮ ಮಗನ ಬರವಣಿ ಅಲ್ಲ ಎಂದಿದ್ದಾರೆ ಕುಟುಂಬಸ್ಥರು, ಕಾಲೇಜ್‌ನವರು ಸೃಷ್ಟಿ ಮಾಡಿರುವ ಡೆತ್ ನೋಟ್ ಅಂತ ಆಕ್ರೋಶ ವ್ಯಕ್ತಪಡಿಸಿದ್ದು, ನಮ್ಮ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Related Articles

Back to top button
error: Content is protected !!