ಯುವಜನ
ಹಾಸ್ಟೆಲ್ನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಎಂಬಿಎ ವಿದ್ಯಾರ್ಥಿ ಸಾವು

Views: 82
ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎಂಬಿಎ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ವಿವಿ ಕ್ಯಾಂಪಸ್ ನಲ್ಲಿ ಇರುವ ಕೃಷ್ಣ ಹಾಸ್ಟೆಲ್ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ.
ಚೇತನ್ ನಾಯಿಕ (25) ಮೃತ ವಿದ್ಯಾರ್ಥಿ.
ಹಾಸ್ಟೆಲ್ನಿಂದ ಜಿಗಿದ ವಿದ್ಯಾರ್ಥಿಗೆ ಗಂಭೀರ ಗಾಯವಾಗಿತ್ತು. ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಈ ಘಟನೆ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಡಿಸಿಎಂ ರೋಹನ್ ಜಗದೀಶ್ ಮಾಹಿತಿ ಮಾಹಿತಿ ನೀಡಿದ್ದು, ಹಾಸ್ಟೆಲ್ ಮೇಲಿನಿಂದ ಬಿದ್ದ ವಿದ್ಯಾರ್ಥಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಪ್ರಜ್ಞಾಹೀನ ಸ್ಥಿತಿಯಲ್ಲಿ ಚೇತನ್ನನ್ನು ಪೋಷಕರು ಮನೆಗೆ ಕರೆದುಕೊಂಡು ಹೊಗಿದ್ದರು. ಚೇತನ್ ಮನೆಯಲ್ಲಿ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.






