ಇತರೆ

ಹಾಸ್ಟೆಲ್ ಕಿಟಕಿಗೆ ನೇಣು ಬಿಗಿದುಕೊಂಡು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ: ಪೋಷಕರ ತೀವ್ರ ಆಕ್ರೋಶ

Views: 33

ಕನ್ನಡ ಕರಾವಳಿ ಸುದ್ದಿ: ದಾವಣಗೆರೆ ನಗರದ ಪ್ರತಿಷ್ಠಿತ ‘ಟೀಮ್ ಅಕಾಡೆಮಿ’ಯ ಹಾಸ್ಟೆಲ್ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಹೂವಿನ ಹಡಗಲಿ ತಾಲ್ಲೂಕಿನ ಕುರುವತ್ತಿ ಗ್ರಾಮದ 17 ವರ್ಷದ ರಂಜಿತಾ ಎಂದು ಗುರುತಿಸಲಾಗಿದೆ. ಕಳೆದ ಒಂದೂವರೆ ವರ್ಷದಿಂದ ದಾವಣಗೆರೆಯ ಟೀಮ್ ಅಕಾಡೆಮಿಯಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಈಕೆ, ರಾತ್ರಿ ಹಾಸ್ಟೆಲ್ನ ಕಿಟಕಿಗೆ ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಮಗಳ ಅನಿರೀಕ್ಷಿತ ಸಾವಿನ ಬಗ್ಗೆ ಪೋಷಕರು ತೀವ್ರ ಅನುಮಾನ ವ್ಯಕ್ತಪಡಿಸಿದ್ದಾರೆ. ಇದು ಆತ್ಮಹತ್ಯೆಯಲ್ಲ, ಬದಲಿಗೆ ಮಗಳನ್ನು ಹೊಡೆದು ಕೊಲೆ ಮಾಡಿ ನೇಣು ನಂತರ ನೇಣು ಹಾಕಲಾಗಿದೆ ಎಂದು ಅವರು ಅಕಾಡೆಮಿ ಆಡಳಿತ ಮಂಡಳಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮೃತರ ಪೋಷಕರು ನಗರದ ವಿದ್ಯಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ.

Related Articles

Back to top button
error: Content is protected !!