ಇತರೆ
ಹಾಸ್ಟೆಲ್ ನಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ ಹಲ್ಲೆ:ಬಾಲಕ ಸಾವು
Views: 43
ಕನ್ನಡ ಕರಾವಳಿ ಸುದ್ದಿ: ಕ್ಷುಲ್ಲಕ ಕಾರಣಕ್ಕೆ 9ನೇ ತರಗತಿ ವಿದ್ಯಾರ್ಥಿ ಹಾಸ್ಟೆಲ್ ವಾರ್ಡನ್, ಬಾಲಕರ ಮೇಲೆ ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಓರ್ವ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. 9ನೇ ತರಗತಿ ವಿದ್ಯಾರ್ಥಿ ರಾಡ್ನಿಂದ ಮನಬಂದಂತೆ ಹೊಡೆದಿದ್ದು, ಓರ್ವ ಬಾಅಲಕ ಮೃತಪಟ್ಟಿದ್ದಾನೆ. ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹಲ್ಲೆ ಬಳಿಕ ಬಾಲಕ ಪರಾರಿಯಾಗಿದ್ದಾನೆ. ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಡ್ನಿಂದ ಹೊಡೆದಿದ್ದಾನೆ ಎಂದು ಶಾಲಾ ಆಡಳಿತ ಮಂಡಳಿ ಹೇಳಿದೆ. ಆದರೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಹಲ್ಲೆ ನಡೆಸಿರುವ ವಿದ್ಯಾರ್ಥಿ ಡ್ರಗ್ ಅಡಿಕ್ಟ್ ಆಗಿರುವ ಶಂಕೆ ಇದ್ದು, ಇಷ್ಟೆಲ್ಲ ಹುಡುಗರ ಮೇಲೆ ಆತ ಒಬ್ಬನೇ ಹಲ್ಲೆ ಮಾಡೋದಕ್ಕೆ ಹೇಗೆ ಸಾಧ್ಯ? ಇದಕ್ಕೆಲ್ಲಾ ಶಾಲಾ ಆಡಳಿತ ಮಂಡಳಿಯೇ ನೇರ ಹೊಣೆ ಎಂದು ಮೃತ ವಿದ್ಯಾರ್ಥಿ ಪೋಷಕರು ಆರೋಪಿಸಿದ್ದಾರೆ.






