ಯುವಜನ
ಹಾಸ್ಟೆಲ್ ಕೊಠಡಿಯ ಮಂಚಕ್ಕೆ ನೇಣು ಬಿಗಿದುಕೊಂಡು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Views: 234
ಕನ್ನಡ ಕರಾವಳಿ ಸುದ್ದಿ: ಹಾಸ್ಟೆಲ್ ಕೊಠಡಿಯಲ್ಲಿರುವ ಮಂಚಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಹೊರವಲಯದಲ್ಲಿ ನಡೆದಿದೆ.
17 ವರ್ಷದ ಬಿಂದುಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಚಿಕ್ಕಬಳ್ಳಾಪುರ ಮೂಲದ ಬಿಂದುಶ್ರೀ ಕೋಲಾರದ ಶ್ರೀನಿವಾಸಪುರದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು.
ಏಕಾಏಕಿ ಹಾಸ್ಟೆಲ್ ಕೊಠಡಿಯಲ್ಲಿ ತಾನು ಮಲಗುವ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.






