ಶಿಕ್ಷಣ

ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನು ನೀಡಿ ಸರ್ಕಾರಕ್ಕೆ ಹೈಕೋರ್ಟ್‌  ಮಹತ್ವದ ಆದೇಶ

Views: 72

ಕನ್ನಡ ಕರಾವಳಿ ಸುದ್ದಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್‌ ಬದಲಿಗೆ ಅಂಕಗಳನ್ನು ನೀಡುವಂತೆ ಹೈಕೋರ್ಟ್‌ ಸೂಚನೆ ನೀಡಿದ್ದರೂ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ಈ ಸಂಬಂಧ ಹೈಕೋರ್ಟ್ನಲ್ಲಿ ಇಂದು ಅರ್ಜಿ ವಿಚಾರಣೆ ನಡೆದಿದ್ದು, ಹಿಂದಿ ಭಾಷೆಗೆ ಅಂಕ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಹಿಂದಿ ಭಾಷೆಗೆ ಕೇವಲ ‘ಗ್ರೇಡ್’ ನೀಡುವ ಬದಲಾಗಿ, ಇತರ ವಿಷಯಗಳಂತೆ ಅಂಕಗಳನ್ನು ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಎಸ್ಎಸ್ಎಲ್‌ಸಿ ಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡುವಂತೆ ಈ ಹಿಂದೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮರುಪರಿಶೀಲನ ಅರ್ಜಿ ಸಲ್ಲಿಸಿತ್ತು. ಇದೀಗ ಹೈಕೋರ್ಟ್ ಮರುಪರಿಶೀಲನೆ ಅರ್ಜಿಯನ್ನು ವಜಾಗೊಳಿಸಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನು ನೀಡಿ ಎಂದು ಮಹತ್ವದ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಇ.ಎಸ್ ಇಂದಿರೇಶ್ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ.

ಪ್ರಸಕ್ತ ಸಾಲಿಗೆ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡಿ ಎಂದು ಆದೇಶ ಹೊರಡಿಸಿದ್ದು, ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ವಜಾಗೊಂಡಿದೆ. ಹಿಂದಿ ಭಾಷೆಯಲ್ಲಿ ಲಕ್ಷಕ್ಕೂ ಹೆಚ್ಚು ಮಂದಿ ಅನುತ್ತೀರ್ಣಗೊಂಡಿದ್ದರು. ಹೀಗಾಗಿ ವಿದ್ಯಾರ್ಥಿಗಳ ಮೇಲೆ ಒತ್ತಡ ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ. ಸೂಕ್ತ ತಿದ್ದುಪಡಿಯೊಂದಿಗೆ ಸರ್ಕಾರ ಕರಡು ರೂಪಿಸುತ್ತಿದೆ. ಅಂಕದ ಬದಲು ಗ್ರೇಡ್ ನೀಡಲಾಗುತ್ತಿದೆ ಎಂದು ಎಜಿ ಶಶಿಕರಣ್ ಶೆಟ್ಟಿ ವಾದ ಮಂಡಿಸಿದರು.

ಎಸ್ಎಸ್ಎಲ್‌ಸಿ ಪರೀಕ್ಷೆ ಆಧಿಸೂಚನೆ ಹೊರಡಿಸಿದಾಗಲೇ ಇದನ್ನು ಸ್ಪಷ್ಟಪಡಿಸಬೇಕಿತ್ತು. ಅಧಿಸೂಚನೆಯಲ್ಲಿ ಇಲ್ಲದ ಗ್ರೇಡ್ ಪದ್ದತಿ ಈಗ ಅನುಷ್ಠಾನಗೊಳಿಸುತ್ತಿದ್ದೀರಿ. ಪಿಯುಸಿಯಲ್ಲಿ ಈಗ 83 ಪ್ರತಿಶತ ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದಾರೆ. ನೀವು ಅದನ್ನು ಪಾಸ್ ಮಾಡಬೇಕೆಂದಿದ್ದರೆ ಪರೀಕ್ಷೆಯನ್ನೇ ರದ್ದು ಮಾಡಿ. ನಿಯಮ ರೂಪಿಸಿದ ಬಳಿಕ ಸರ್ಕಾರ ಸೂಕ್ತವನಿಸಿದ ಕ್ರಮ ತೆಗೆದುಕೊಳ್ಳಬಹುದು. ನಿಯಮ ರೂಪಿಸುವ ಮುಂಚೆಯೇ ಅಂಕ ಪದ್ಧತಿ ಬದಲಾವಣೆ ಸೂಕ್ತವಲ್ಲ. ಹೀಗಾಗಿ 2025- 26ನೇ ಸಾಲಿನಲ್ಲಿ ಹಿಂದಿ ಭಾಷೆಗೆ ಅಂಕ ನೀಡಿ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.

 

 

Related Articles

Back to top button
error: Content is protected !!