ಇತರೆ

ಹಿಂದೂ ಯುವ ಸೇನೆಯ ಮುಖಂಡ ಮಂಜು ಕೊಳ ಅವರಿಗೆ ಚೂರಿ ಇರಿತ ಪ್ರಕರಣ: ಐವರ ಬಂಧನ

Views: 45

ಕನ್ನಡ ಕರಾವಳಿ ಸುದ್ದಿ: ಹಿಂದೂ ಯುವ ಸೇನೆಯ ಮುಖಂಡ ಮಂಜು ಕೊಳ ಅವರಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪಲಿಮಾರು ನಿವಾಸಿಗಳಾದ ಪ್ರಜೇಶ್, ಪುನೀತ್, ಅಮೃತ್, ಅಭಿಜಿತ್ ಹಾಗೂ ಇನೋರ್ವ ಆರೋಪಿಯನ್ನು ಬಂಧಿಸಲಾಗಿದೆ.

ಘಟನೆ ವಿವರ: ಪ್ರೀತಿಯ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸುವ ಸಲುವಾಗಿ ಮಂಜು ಕೊಳ ಅವರನ್ನು ಕರೆದಿದ್ದರು ಎನ್ನಲಾಗಿದೆ. ಈ ಸಂದರ್ಭ ಮಾತಿಗೆ ಮಾತು ಬೆಳೆದಾಗ ಯುವಕ ಚೂರಿ ಇರಿದಿದ್ದಾನೆ ಎಂದು ತಿಳಿದುಬಂದಿದೆ. ಹೊಟ್ಟೆ ಭಾಗಕ್ಕೆ ಇರಿದ ಪರಿಣಾಮ ಅಲ್ಲೇ ಕುಸಿದ ಮಂಜು ಕೊಳ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕೃತ್ಯ ವೈಯಕ್ತಿಕ ಕಾರಣಗಳಿಂದ ನಡೆದಿದೆ. ಘಟನೆಗೆ ಯಾವುದೇ ಕೋಮು ಹಿನ್ನೆಲೆ ಇಲ್ಲ. ಆದ್ದರಿಂದ ಯಾರೂ ಸಹ ವದಂತಿಗಳನ್ನು ಹರಡಬಾರದು. ಗಾಯಗೊಂಡ ಮಂಜು ಕೊಳ ಅಪಾಯದಿಂದ ಪಾರಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.

Related Articles

Back to top button
error: Content is protected !!