ಕರಾವಳಿ
ಹಿರಿಯಡ್ಕ: ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Views: 285
ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪ ಪಿಯುಸಿ ವಿದ್ಯಾರ್ಥಿನಿಯೊರ್ವಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಮೃತ ವಿದ್ಯಾರ್ಥಿನಿ ಪೆರ್ಡೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ನಯನ(17) ಎಂದು ತಿಳಿಯಲಾಗಿದೆ.
ಮಾನಸಿಕವಾಗಿ ನೊಂದ ನಯನ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಉಪ್ಪರಿಗೆ ಮಾಡಿನ ಜಂತಿಗೆ ಚೂಡಿದಾರ ಶಾಲನ್ನು ಬಿಗಿದು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.