ಸಾಮಾಜಿಕ
ಹಿರಿಯರನ್ನು ಆರೈಕೆ ಮಾಡದಿದ್ದರೆ ಅಳಿಯ, ಸೊಸೆಗೂ ಶಿಕ್ಷೆ..! ಶೀಘ್ರದಲ್ಲಿಯೇ ಮುಸೂದೆ ಮಂಡನೆ

Views: 148
ಮಕ್ಕಳಿದ್ದರೂ ವೃದ್ಧಾಪ್ಯದ ದಿನಗಳಲ್ಲಿ ಅನಾಥರಂತೆ ಜೀವನ ಸಾಗಿಸಬೇಕಾದ ಅನಿವಾರ್ಯತೆಗೆ ತುತ್ತಾಗಿರುವ ಹಿರಿಯ ನಾಗರಿಕರ ಜೀವನವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ಹಿರಿಯ ನಾಗರಿಕರ ಕಲ್ಯಾಣ ಕಾಯ್ದೆ- 2007 ಈ ಕಾಯ್ದೆಗೆ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರ ಹಿರಿಯ ನಾಗರಿಕರನ್ನು ಕೇವಲ ಅವರ ಮಕ್ಕಳಷ್ಟೇ ಅಲ್ಲ ಅಳಿಯಂದಿರು ಮತ್ತು ಸೊಸೆಯಂದಿರು ಕೂಡ ಚೆನ್ನಾಗಿ ನೋಡಿಕೊಳ್ಳದೆ ಹೋದಲ್ಲಿ ಅವರು ಶಿಕ್ಷೆಗೆ ಅರ್ಹರು.ಅಳಿಯಂದಿರು ಹಾಗೂ ಸೊಸೆಯಂದಿರು ಕೂಡ ಮಾಸಾಶನ ನೀಡಬೇಕು ಎಂಬ ಅಂಶಗಳನ್ನು ಸೇರಿಸಲಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ನೀಡಲಾಗಿದೆ. ಸಂಸತ್ತಿನ ಇದೇ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಆಗುವ ಸಾಧ್ಯತೆ ಇದೆ. ಈ ಕಾಯ್ದೆ ಜಾರಿಗೆ ಬಂದ ನಂತರ ಆಗುತ್ತಿರುವ ಅತಿ ಮಹತ್ವದ ತಿದ್ದುಪಡಿಯಾಗಿದೆ.






