ಆರೋಗ್ಯ

ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣ: ವೈರಲ್ ವಿಡಿಯೋ ನಿಜವಾಗಿವೆ, ಎಡಿಟ್ ಆಗಿಲ್ಲ ಎಂದು ಸಾಬೀತು

Views: 164

ಕನ್ನಡ ಕರಾವಳಿ ಸುದ್ದಿ: ಸಮವಸ್ತ್ರದಲ್ಲಿಯೇ ಕಚೇರಿಯಲ್ಲಿ ಮಹಿಳೆಯೋರ್ವರ ಜೊತೆ ಅನುಚಿತವಾಗಿ ವರ್ತಿಸಿದ್ದ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ.

ವಿಡಿಯೋಗಳು ಸಂಪೂರ್ಣವಾಗಿ ನಿಜವಾಗಿದ್ದು, ಅವು ಡೀಪ್‌ಫೇಕ್, AI ನಿರ್ಮಿತ ಅಥವಾ ಯಾವುದೇ ರೀತಿಯಲ್ಲಿ ಎಡಿಟೆಡ್ ಆಗಿರುವ ದೃಶ್ಯಗಳಲ್ಲ ಎಂಬುದು ದೃಢ ಪಟ್ಟಿದೆ.

ಈ ಕುರಿತು ತನಿಖೆ ನಡೆಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ ನೇತೃತ್ವದಲ್ಲಿ ರಾಜ್ಯ ಸರ್ಕಾರ ನೇಮಿಸಿದ್ದ 4 ಮಂದಿ ಐಪಿಎಸ್ ಅಧಿಕಾರಿಗಳ ತಂಡ 100 ಪುಟಗಳ ವರದಿ ನೀಡಿದೆ.

ವಿಡಿಯೋಗಳು ನಿಜವಾಗಿವೆ, ಎಡಿಟ್ ಆಗಿಲ್ಲ

ಫಾರೆನ್ಸಿಕ್ ಸೈನ್ಸ್ ಲ್ಯಾಬೋರೇಟರಿ (FSL) ದೃಢೀಕರಣದಂತೆ ವಿಡಿಯೋಗಳಲ್ಲಿ ಯಾವುದೇ ಮಾರ್ಪಾಡಾಗಿಲ್ಲ

ರಾಮಚಂದ್ರ ರಾವ್ ಅವರ ಬೆಳಗಾವಿ ಅವಧಿಯಲ್ಲಿ ಕೆಲಸ ಮಾಡಿದ್ದ ಸಿಬ್ಬಂದಿ (ಚಾಲಕರು, ಕಚೇರಿ ಸಿಬ್ಬಂದಿ) ಮಹಿಳೆಯರನ್ನು ಗುರುತಿಸಿದ್ದು, ಅವರು ರಾಮಚಂದ್ರ ರಾವ್ ಅವರ ಖಾಸಗಿ ಕಚೇರಿಗೆ ಹಲವು ಬಾರಿ ಭೇಟಿ ನೀಡಿದ್ದನ್ನು ದೃಢಪಡಿಸಿದ್ದಾರೆ.

ಮೂಲಗಳ ಪ್ರಕಾರ, ಮಹಿಳೆಯರಲ್ಲಿ ಒಬ್ಬರು ತಮ್ಮ ಮೊಬೈಲ್‌ನಲ್ಲಿ ಈ ವಿಡಿಯೋವನ್ನು ಉದ್ದೇಶಪೂರ್ವಕವಾಗಿ ಚಿತ್ರೀಕರಿಸಿದ್ದಾರೆ

ಪ್ರಕರಣದಲ್ಲಿ ಮುಖ್ಯವಾದ ವಿಡಿಯೋದಲ್ಲಿರುವ ಇಬ್ಬರೂ ಮಹಿಳೆಯರು ಘಟನೆ ಬೆಳಕಿಗೆ ಬಂದ ಬಳಿಕ ಸಂಪರ್ಕಕ್ಕೆ ಸಿಗುತ್ತಿಲ್ಲ ಎನ್ನಲಾಗಿದೆ. ಆದರೆ ಮುಂದಿನ ತನಿಖೆಗೆ ಅವರ ಹೇಳಿಕೆ ಅತ್ಯಂತ ಪ್ರಮುಖವಾಗಿದ್ದು, ಅವರು ತನಿಖಾ ತಂಡದ ಮುಂದೆ ಹಾಜರಾಗಲೇಬೇಕಿದೆ. ಮತ್ತೊಂದೆಡೆ ಹಿರಿಯ ಅಧಿಕಾರಿಗಳ ತಂಡದ ವರದಿ ಬಳಿಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ರಾವ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಅಧಿಕೃತ ಇಲಾಖಾ ತನಿಖೆ ಪ್ರಾರಂಭವಾಗಿದೆ.

Related Articles

Back to top button
error: Content is protected !!