ಮಾಹಿತಿ ತಂತ್ರಜ್ಞಾನ

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಖಾತೆ ತೆರೆದು ಹುಡುಗಿಯಂತೆ  ನಟಿಸಿ ವ್ಯಕ್ತಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚಿಸಿದವ  ಅರೆಸ್ಟ್

Views: 3

ಶಿವಮೊಗ್ಗ : ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಪಿ. ಸುಜೇಂದ್ರ (21) ಎಂಬಾತ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದ್ದು ಫೇಸ್ಬುಕ್ ಖಾತೆಯಲ್ಲಿ ಹೆಣ್ಣಿನ ಹೆಸರಲ್ಲಿ ಖಾತೆ ಮಾಡಿಕೊಂಡು ವ್ಯಕ್ತಿಯೊಬ್ಬರಿಗೆ ವಂಚಿಸಿದ್ದಾನೆ.

ಸಿರಾ ಪಟ್ಟಣದ ವಿದ್ಯಾನಗರದ ನಿವಾಸಿ ಭರತ್‌ಕುಮಾರ್ ಎಂಬಾತನ ಜೊತೆ ಈತ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಶಿಪ್ ಮಾಡಿಕೊಂಡಿದ್ದ.ಭರತ್ ಕುಮಾರ್’ಗೆ ಫೇಸ್ ಬುಕ್’ನಲ್ಲಿ ಪರಿಚಯ ಮಾಡಿಕೊಂಡ ಆರೋಪಿಗಳು ಶರ್ಮಿಳ ಮತ್ತು ದಿವ್ಯ ಎಂಬ ಹೆಸರಿನಲ್ಲಿ ಮೆಸೆಂಜರ್ ಹಾಗೂ ವಾಟ್ಸಾಪ್ ಮೂಲಕ ಚಾಟ್ ಮಾಡಿದ್ದಾನೆ. ಬಳಿಕ ಕಷ್ಟ ಇದೆ ಎಂದು ನಂಬಿಸಿ ಹಣವನ್ನು ಫೋನ್ ಪೇ, ಪೇಟಿಎಂ, ಗೂಗಲ್ ಪೇ ಹಾಗೂ ಬ್ಯಾಂಕ್ ಖಾತೆಗಳಿಗೆ ಹಾಕಿಸಿಕೊಂಡು ವಂಚಿಸಿದ್ದಾರೆ.

ಸಂತ್ರಸ್ತ ವಿದ್ಯಾರ್ಥಿಯಾಗಿದ್ದು, ಹಣ ಕಳೆದುಕೊಂಡ ಉದ್ಯಮಿ ಆತನ ತಂದೆ ಶಾಂತಕುಮಾರ್ ಸಿಇಎನ್ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಡಿಸೆಂಬರ್ 12ರಂದು ಶಿವಮೊಗ್ಗ ನಗರ, ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ ಟೌನ್ ನಿವಾಸಿ ಸುಜೇಂದ್ರ ಎಂ.ಬಿ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಇತರೆ ಆರೋಪಿಗಳ ಬಂಧನಕ್ಕೆ ತನಿಖೆ ಮುಂದುವರಿದಿದೆ.

Related Articles

Back to top button