ಹುಬ್ಬಳ್ಳಿ:ನೇಹಾ ಹತ್ಯೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ: ಯುವಕನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ

Views: 187
ಹುಬ್ಬಳ್ಳಿ :ನೇಹಾ ಹತ್ಯೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಅನ್ಯಕೋಮಿನ ಯುವಕನೊಬ್ಬ ದಲಿತ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ.
ಈ ಪ್ರಕರಣ ಬೆಳಕಿಗೆ ಬಂದು 24 ಗಂಟೆ ಕಳೆದರೂ ಪೊಲೀಸರು ಪ್ರಕರಣ ದಾಖಲಿಸಲು ಮೀನಾಮೇಷ ಏಣಿಸಿದ್ದಾರೆ ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹೋರಾಟ ತೀವ್ರವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಕೊನೆಗೂ ಎಫ್ಐಆರ್ ದಾಖಲಿಸಿ, ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಹುಬ್ಬಳ್ಳಿ ನವನಗರದ ಎಪಿಎಂಸಿ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ಅಪ್ರಾಪ್ತೆ ಮೇಲೆ ಅನ್ಯಕೋಮಿನ ಯುವಕನೊಬ್ಬ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ. ಹೊಟ್ಟೆ ನೋವಿನಿಂದ ಬಳಲುತಿದ್ದ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ದಾಗ ಸತ್ಯ ಹೊರಬಿದ್ದಿದೆ. ಆಪ್ರಾಪ್ತೆ ಗರ್ಭಿಣಿಯಾಗಿದ್ದ ವಿಷಯ ತಿಳಿಯುತ್ತಿದ್ದಂತೆ ಆರೋಪಿ ಸದ್ದಾಂ ಹುಸೇನ್ ಎಸ್ಕೇಪ್ ಆಗಿದ್ದ.
ಸದ್ದಾಂ ಹಾಗೂ ಅಪ್ರಾಪ್ತೆ ಒಂದೇ ಕಾಲೇಜಿನಲ್ಲಿ ಓದ್ತಿದ್ದರು. ಸ್ನೇಹ, ಸಲುಗೆ ಅಪ್ರಾಪ್ತೆ ಮೇಲೆ ಆರೋಪಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಈ ವಿಚಾರ ಮನೆಯಲ್ಲಿ ಹೇಳಿದ್ರೆ ಕೊಲೆ ಮಾಡುವ ಬೆದರಿಕೆ ಹಾಕಿದ್ದನಂತೆ.






