ಇತರೆ

ಹುಬ್ಬಳ್ಳಿ:ಯುವಕನನ್ನು ಬರ್ಬರವಾಗಿ ಕೊಲೆಗೈದು ನಡುರಸ್ತೆಯಲ್ಲೇ ಬಿಸಾಡಿದ ದುಷ್ಕರ್ಮಿಗಳು! 

Views: 31

ಕನ್ನಡ ಕರಾವಳಿ ಸುದ್ದಿ: ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ದುಷ್ಕರ್ಮಿಗಳು ರಾಷ್ಟ್ರೀಯ ಹೆದ್ದಾರಿ ಮೇಲೆ ಶವವನ್ನು ಬಿಸಾಡಿ ಹೋಗಿರುವ ಘಟನೆ ಹುಬ್ಬಳ್ಳಿಯಲ್ಲಿ  ನಡೆದಿದೆ.

ಹುಬ್ಬಳ್ಳಿಯ ಗದಗ ರಸ್ತೆಯಲ್ಲಿ ಐಟಿಸಿ ಗೋಡೌನ್ ಸಮೀಪ ರಸ್ತೆಯ ಮೇಲೆ ಶವ ಬಿಸಾಡಿ ಹೋಗಿದ್ದಾರೆ. 29 ವರ್ಷದ ಮಂಜುನಾಥ್ ಗಾಣಿಗೇರ ಕೊಲೆಯಾದ ಯುವಕ.

ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವ ಕಾರಣಕ್ಕಾಗಿ ಯುವಕನ್ನು ಕೊಲೆ ಮಾಡಲಾಗಿದೆ ಎಂಬುದು ತನಿಖೆ ಬಳಿಕ ಬಯಲಾಗಬೇಕಿದೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಕೊಲೆಗೆ ನಿಖರ ಕಾರಣವೇನು, ಹಂತಕರು ಯಾರು ಎಂಬುದು ಇನ್ನೂ ನಿಗೂಢವಾಗಿದೆ. ಹಳೆಯ ದ್ವೇಷ ಅಥವಾ ವೈಯಕ್ತಿಕ ವೈಮನಸ್ಸಿನ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆಯೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ನಡುರಸ್ತೆಯಲ್ಲೇ ಮೃತದೇಹ ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!