ಧಾರ್ಮಿಕ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ನಮಾಜ್ ಮತ್ತು ರಾಷ್ಟ್ರಧ್ವಜಾರೋಹಣಕ್ಕೆ ಮಾತ್ರ ಅವಕಾಶ, ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಆಕ್ಷೇಪ !

Views: 86

ಹುಬ್ಬಳ್ಳಿ, ಇಲ್ಲಿನ ಚೆನ್ನಮ್ಮ ವೃತ್ತದ ಬಳಿ ಇರುವ ವಿವಾದಿತ ಈದ್ಗಾ ಮೈದಾನದಲ್ಲಿ ನಿರಂತರ ಪ್ರಯತ್ನ, ಹೋರಾಟಗಳ ಫಲವಾಗಿ ಗಣೇಶ ಕೂರಿಸಲು, ಆಗಸ್ಟ್ 15ರಂದು ಧ್ವಜಾರೋಹಣ ಮಾಡಲು ಅವಕಾಶ ಸಿಕ್ಕಿದೆ. ಮೊನ್ನೆಯಷ್ಟೆ ಸರ್ಕಾರವೇ ಇಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಿದರೂ ಸಹಿತ ಇಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ವಿರೋಧ ವ್ಯಕ್ತಪಡಿಸಿದೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮೂರು ದಿನಗಳ ಅವಕಾಶ ಸಿಕ್ಕಿದೆ. ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ ನಾಳೆ ಶನಿವಾರ ‘ರಾಮರೂಪಿ ಗಣೇಶ’ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಒಂದು ದಿನ ಬಾಕಿ ಇರುವಾಗಲೇ ಇದೀಗ ಎಸ್‌ಡಿಪಿಐ ಆಕ್ಷೇಪ ವ್ಯಕ್ತಪಡಿಸಿದೆ.

ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನೀಡಿರುವ ಅನುಮತಿಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ನಗರ ಬ್ಲಾಕ್‌ ಕಮಿಟಿ ಅಧ್ಯಕ್ಷ ಮಲ್ಲಿಕ್ ಜಾನ್ ಕಳಸ್ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತರ ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ: ಷರತ್ತುಗಳೇನು?

ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಗೆ ಪ್ರಾರ್ಥನೆ (ನಮಾಜ್) ಮಾಡಲು ಮತ್ತು ಜನವರಿ 26 ಹಾಗೂ ಆಗಸ್ಟ್ 15ರಂದು ರಾಷ್ಟ್ರಧ್ವಜಾರೋಹಣ ಮಾಡಲು ಮಾತ್ರ ಅವಕಾಶ ಇರುತ್ತದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುತ್ತಿರುವುದು ಸಮುದಾಯದ ಜನರಿಗೆ ಅಸಮಾಧಾನ ಉಂಟು ಮಾಡಿದೆ’ ಎಂದು ಅವರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ವಿವಾದಾತ್ಮಕ ಮೈದಾನದಲ್ಲಿ ಪದೇ ಪದೆ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುತ್ತಿರುವುದು ಎರಡೂ ಸಮುದಾಯದ ಜನರಲ್ಲಿ ವೈಷಮ್ಯ ಉಂಟಾಗಲು ದಾರಿ ಮಾಡಿಕೊಟ್ಟಂತಾಗುತ್ತದೆ. ಅಧಿಕಾರಿಗಳು ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪಿಸಲು ನೀಡಿರುವ ಅನುಮತಿಯನ್ನು ತಕ್ಷಣ ರದ್ದುಪಡಿಸಿ, ಪಾಲಿಕೆಗೆ ಸಂಬಂಧಿಸಿದ ಬೇರೆ ಮೈದಾನದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೊಡಬೇಕು’ ಎಂದು ಒತ್ತಾಯಿಸಿದ್ದಾರೆ

 

 

Related Articles

Back to top button
error: Content is protected !!