ರಾಜಕೀಯ

ಹೆಚ್‌.ಡಿ ಕುಮಾರಸ್ವಾಮಿ ಆಪ್ತ  ಜೆಡಿಎಸ್ ಮುಖಂಡನ ಬರ್ಬರ ಹತ್ಯೆ

Views: 111

ಕನ್ನಡ ಕರಾವಳಿ ಸುದ್ದಿ: ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್‌ ಮುಖಂಡನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಹಂತಕರು ಕೊಲೆ ಮಾಡಿದ್ದಾರೆ. ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಹತ್ಯೆಗೊಳಗಾದ ವ್ಯಕ್ತಿಯನ್ನು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿಯವರ ಅಪ್ಪಟ ಅಭಿಮಾನಿ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಎಂದು ಗುರುತಿಸಲಾಗಿದೆ.

ಈ ಘಟನೆ ತಮ್ಮ ನಾಯಕನಹಳ್ಳಿ ಗೇಟ್‌ನಲ್ಲಿರುವ ಮೆಡಿಕಲ್ ಸ್ಟೋರ್‌ನಿಂದ ಮನೆಗೆ ಸ್ಕೂಟಿಯಲ್ಲಿ ತೆರಳುತ್ತಿರುವಾಗ ನಡೆದಿದೆ. ಶುಕ್ರವಾರ ರಾತ್ರಿ 9 ಗಂಟೆ ವೇಳೆಗೆ ವೆಂಕಟೇಶ್ ಅವರ ಹತ್ಯೆ ಮಾಡಲಾಗಿದೆ. ಮನೆಗೆ ತೆರಳುತ್ತಿದ್ದ ವೆಂಕಟೇಶರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಅವರ ಕೈ ಕಟ್ ಮಾಡಿ ಅವರನ್ನು ಕೆಳಗೆ ಬೀಳಿಸಿ ಮನಸೋ ಇಚ್ಚೆ ಕೊಚ್ಚಿದ್ದಾರೆ.

ಲಾಂಗ್‌ನಿಂದ ಬೀಸಿದ್ದರಿಂದ ಅವರ ಎಡಗೈ ತೋಳಿನ ಭಾಗ ಕಟ್ ಆಗಿ, ಗಾಡಿ ಸಮೇತ ವೆಂಕಟೇಶ್ ನೆಲಕ್ಕೆ ಬಿದ್ದಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದ ವೆಂಕಟೇಶ್ ಅವರನ್ನು ಕಂಡು ದಾರಿಹೋಗುವವರು ಮಗನಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ವೆಂಕಟೇಶ್, ರಿಯಲ್ ಎಸ್ಟೇಟ್ ಹಾಗೂ ಬಡ್ಡಿ ವ್ಯವಹಾರ ನಡೆಸುತ್ತಿದ್ದರು. ಇದೇ ವಿಚಾರದಲ್ಲಿ ಅಥವಾ ಹಳೇ ವೈಷಮ್ಯದಿಂದ ಹತ್ಯೆ ನಡೆದಿದೆ ಎನ್ನಲಾಗುತ್ತಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related Articles

Back to top button