ಇತರೆ

ಹೆಬ್ರಿ:ಕಾರು ಬೈಕಿಗೆ ಡಿಕ್ಕಿ: ಬೈಕ್ ಸವಾರ ಸಾವು

Views: 157

ಕನ್ನಡ ಕರಾವಳಿ ಸುದ್ದಿ: ಕಾರು ಬೈಕಿಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ತಡರಾತ್ರಿ ಹೆಬ್ರಿಯ ಶಿವಪುರ ಗ್ರಾಮದ ರಾಂಪುರದಲ್ಲಿ ನಡೆದಿದೆ.

ಶಿವಪುರ ಮೂರ್ಸಾಲು ನಿವಾಸಿ ರಾಹುಲ್(25) ಮೃತ ಪಟ್ಟ ಯುವಕ

ಹೆಬ್ರಿ ಕಡೆಯಿಂದ ಶಿವಪುರ ಕಡೆಗೆ ಹೋಗುತ್ತಿದ್ದ ಕಾರು, ಎದುರಿನಿಂದ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ರಾಹುಲ್ ಬೈಕ್ ಸಮೇತ ರಸ್ತೆಗೆ ಬಿದ್ದರು.ಗಂಭೀರ ಗಾಯಗೊಂಡ ರಾಹುಲ್ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು.ಚಿಕಿತ್ಸೆಗೆ ಸ್ಪಂದಿಸದೆ ಅವರು ಜ.5ರಂದು ಮೃತಪಟ್ಟರು ಎಂದು ತಿಳಿದುಬಂದಿದೆ.

ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!