ಇತರೆ

ಹೆಬ್ರಿ: ಗಂಡನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಹೆಂಡತಿ

Views: 371

ಕನ್ನಡ ಕರಾವಳಿ ಸುದ್ದಿ:ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಪತಿಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಹೆಬ್ರಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಹೆಬ್ರಿ ನಿವಾಸಿ ಗಣಪತಿ ಎಂದು ಗುರುತಿಸಲಾಗಿದೆ. ಆರೋಪಿ ಪತ್ನಿ ಜಯಂತಿಯನ್ನು ಪೊಲೀಸರು ಬಂಧಿಸಿದ್ದಾರೆ,

ಮೃತ ಗಣಪತಿ ಪ್ರತಿದಿನ ಕುಡಿದು ಬಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದು, ಬುಧವಾರ ಮಧ್ಯಾಹ್ನ ಕೂಡ ಗಣಪತಿ ಅತನ ಹೆಂಡತಿ ಜಯಂತಿಯೊಂದಿಗೆ ಕುಡಿಯಲು ಹಣ ಕೇಳಿದ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದು ಪತ್ನಿ ಜಯಂತಿ ಗಣಪತಿಯನ್ನು ಕತ್ತಿಯಿಂದ ಕಡಿದಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ.

ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ಮುಂದುವರೆದಿದೆ.

Related Articles

Back to top button
error: Content is protected !!