ಶಿಕ್ಷಣ
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜು: ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Views: 63
ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಉಡುಪಿ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಾಲಕರ ವಿಭಾಗದಲ್ಲಿ ಕ್ರಮವಾಗಿ, ಜಿಥಿನ್, ಗೌತಮ್,ಹಾಗೂ ಬಾಲಕಿಯರ ವಿಭಾಗದಲ್ಲಿ ರಿತಿಶಾ, ಸಾನ್ವಿ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.






