ಕ್ರೀಡೆ
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ಕಬಡ್ಡಿ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Views: 305

ಹೆಮ್ಮಾಡಿ;ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಸೆ. 23 ರಂದು ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ/ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
ಬಾಲಕರ ವಿಭಾಗದಲ್ಲಿ ಕ್ರಮವಾಗಿ ವಿಘ್ನೇಶ್,ರತನ್,ರಿತೇಶ್, ನವಾಜ್,ಜಿತೇಂದ್ರ, ಚರಣ್ ಹಾಗೂ ಬಾಲಕಿಯರ ವಿಭಾಗದಲ್ಲಿ ಕುಮಾರಿ ಅನುಷಾ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.






