ಶಿಕ್ಷಣ
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜು: ಶ್ರುತಿಕಾ ಶೆಟ್ಟಿ ಜಿಲ್ಲಾ ಮಟ್ಟದ ಕನ್ನಡ ಭಾಷಣ ಸ್ಪರ್ಧೆಗೆ ಆಯ್ಕೆ

Views: 5
ಕುಂದಾಪುರ: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ ತಾಲೂಕು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಶ್ರುತಿಕಾ ಶೆಟ್ಟಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.