ಶಿಕ್ಷಣ
ಹೆಮ್ಮಾಡಿ ಜನತಾ ಪಿಯು ಕಾಲೇಜು: CA ಫೌಂಡೇಶನ್ ಪರೀಕ್ಷೆಯಲ್ಲಿ ಪ್ರಥಮ್ ಜಿ. ಕಾಂಚನ್,ಅಭಿನವ್ ಜೆ ಶೆಟ್ಟಿ ಸಾಧನೆ
Views: 20
ಕನ್ನಡ ಕರಾವಳಿ ಸುದ್ದಿ: ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ಪ್ರಥಮ್ ಜಿ. ಕಾಂಚನ್ 2026ರ ಮೇ ತಿಂಗಳಿನಲ್ಲಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಉತ್ತೀರ್ಣರಾಗುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಪ್ರಥಮ್ ಜಿ ಕಾಂಚನ್ 230 ಅಂಕ ಹಾಗೂ ಅಭಿನವ್ ಜೆ ಶೆಟ್ಟಿ 208 ಅಂಕಗಳನ್ನು ಪಡೆಯುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಬೋಧಕ, ಬೋಧಕೇತರ ವೃಂದದವರು ಹರ್ಷ ವ್ಯಕ್ತಪಡಿಸಿ, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.






