ಜನಮನ
ಹೊಸ ಪಡಿತರ ಚೀಟಿ ಸದ್ಯಕ್ಕಿಲ್ಲ: ತಿದ್ದುಪಡಿ, ಸೇರ್ಪಡೆಗಷ್ಟೇ ಸೀಮಿತ

Views: 0
ಹೊಸ ಪಡಿತರ ಚೀಟಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವವರಿಗೆ ನಿರಾಸೆ ಮೂಡಿದೆ.
ಕೇವಲ ಪಡಿತರ ಚೀಟಿಯ ತಿದ್ದುಪಡಿ ಹಾಗೂ ಕುಟುಂಬಸ್ಥರ ಸೇರ್ಪಡೆಗೆ ಮಾತ್ರ ಅವಕಾಶ ನೀಡಿ ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನ ಇಲಾಖೆಯು ಸರಕಾರದ ಅಧೀನ ಕಾರ್ಯದರ್ಶಿ ಎ ಹನುಮಂತ ರಾಜು ಆದೇಶ ಹೊರಡಿಸಿದ್ದಾರೆ.
ಮುಂದಿನ ಆದೇಶದವರೆಗೆ ಯಾವುದೇ ಹೊಸ ಪಡಿತರ ಚೀಟಿಯನ್ನು ಮಂಜೂರು ಮಾಡದಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತರಿಗೆ ಸೂಚಿಸಿದ್ದಾರೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗದೆ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಕಾಯುತ್ತಿರುವವರಿಗೆ ರಾಜ್ಯ ಸರ್ಕಾರ ನಿರಾಸೆ ಮೂಡಿದೆ. ಹೀಗಾಗಿ ಸರಕಾರದ ಗ್ಯಾರಂಟಿ ಯೋಜನೆಯನ್ನು ಪಡೆಯಲು ಫಲಾನುಭವಿಗಳಾಗಲು ಸದ್ಯಕ್ಕೆ ಸಾಧ್ಯವಿಲ್ಲ. ಹಲವು ಕುಟುಂಬಗಳು ಇದರಿಂದ ವಂಚಿತರಾಗುವ ಸಾಧ್ಯತೆ ಇದೆ.






