ಆರೋಗ್ಯ

ಹೊಸ ವೈರಸ್ ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ಶಿವಮೊಗ್ಗದಲ್ಲಿ 6 ಮಕ್ಕಳಲ್ಲಿ HMPV..‌!

Views: 106

ಕನ್ನಡ ಕರಾವಳಿ ಸುದ್ದಿ ಸುದ್ದಿ: HMPV ಎಂಬ ಹೊಸ ವೈರಸ್ ಪ್ರಪಂಚದಾದ್ಯಂತ ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೂವರು ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ ಎಂಬ ಆತಂಕದ ಸುದ್ದಿ ವರದಿಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಶಿವಮೊಗ್ಗ ಜಿಲ್ಲೆಯಲ್ಲಿ 6 ಮಕ್ಕಳಲ್ಲಿ HMPV ವೈರಸ್ ಕಾಣಿಸಿಕೊಂಡಿತ್ತು ಎಂಬ ಆಘಾತಕಾರಿ ಮಹಿತಿ ಬಹಿರಂಗವಾಗಿದೆ.

ಶಿವಮೊಗ್ಗದಲ್ಲಿ ನವೆಂಬರ್ ತಿಂಗಳಲ್ಲಿಯೇ 6 ಮಕ್ಕಳಲ್ಲಿ HMPV ವೈರಸ್ ಪತ್ತೆಯಾಗಿತ್ತು. 1 ಹಾಗೂ 2 ವರ್ಷದ ಮಕ್ಕಳಲ್ಲಿ ವೈರಸ್ ಕಾಣಿಸಿಕೊಂಡಿತ್ತು. 6 ಮಕ್ಕಳು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಎಲ್ಲಾ ಆರು ಮಕ್ಕಳು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಅಂದರೆ HMPV ವೈರಸ್ ದೇಶದಲ್ಲಿ ಆತಂಕಸೃಷ್ಟಿಸುವ ಮೊದಲೇ ಶಿವಮೊಗ್ಗದಲ್ಲಿ ಆರು ಮಕ್ಕಳಲ್ಲಿ ದೃಢಪಟ್ಟಿದ್ದು, ಇದೀಗ ಎಲ್ಲಾ 6 ಮಕ್ಕಳು ಗುಣಮುಖರಾಗಿ ಆರೋಗ್ಯದಿಂದ ಇದ್ದಾರೆ ಎನ್ನಲಾಗಿದೆ. ಶಿವಮೊಗ್ಗದಲ್ಲಿ 6 ಮಕ್ಕಳಲ್ಲಿ HMPV ವೈರಸ್ ಸೋಂಕು ಕಾಣಿಸಿಕೊಂಡಿತ್ತು, ಮಕ್ಕಳು ಚಿಕಿತ್ಸೆ ಬಳಿಕ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾಗಿ ಹಾಗೂ ಸೋಂಕಿನ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಖಾಸಗಿ ಆಸ್ಪತ್ರೆ ವೈದ್ಯರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ

Related Articles

Back to top button