ಶಿಕ್ಷಣ
ಹೋಂ ವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿ ಮೇಲೆ ಮನಬಂದಂತೆ ಹಲ್ಲೆ : ಶಿಕ್ಷಕನ ವಿರುದ್ಧ ಎಫ್ಐಆರ್ ದಾಖಲು
Views: 0
ಕನ್ನಡ ಕರಾವಳಿ ಸುದ್ದಿ: ಹೋಂ ವರ್ಕ್ ಮಾಡಿಲ್ಲ ಎಂದು ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಹೊಡೆದು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ಹಲ್ಲೆ ನಡೆಸಿದ ಶಿಕ್ಷಕನ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. 4ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಮೇಲೆ ಶಿಕ್ಷಕ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳದಲ್ಲಿ ನಡೆದಿದೆ. ಕವಿತಾಳದ ಮದರಸಾ ವಸತಿ ಶಾಲೆಯಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ.
ವಿದ್ಯಾರ್ಥಿಯ ಬೆನ್ನು, ಮುಖಕ್ಕೆ ಗುದ್ದಿದ ಪರಿಣಾಮ ಕಣ್ಣಿನ ಭಾಗದಲ್ಲಿ ಗಂಭೀರ ಗಾಯವಾಗಿದೆ. ಈ ಸಂಬಂಧ ಶಿಕ್ಷಕ ಅಬ್ಬಾಸ್ ವಿರುದ್ಧ ವಿದ್ಯಾರ್ಥಿಯ ಪೋಷಕರು ಆಕ್ರೋಶ ಹೊರಹಾಕಿದ್ದು, ಸದ್ಯ ಕವಿತಾಳ ಪೊಲೀಸ್ ಠಾಣೆಯಲ್ಲಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿದೆ.






