ಹೋಟೆಲ್ ಬಿಲ್‌ನಲ್ಲಿ ಗ್ಯಾಸ್ ಶುಲ್ಕ ಹಾಕುವಂತಿಲ್ಲ
Views: 61
ಕನ್ನಡ ಕರಾವಳಿ ಸುದ್ದಿ: ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರವು ಹೋಟೆಲ್ಗಳಲ್ಲಿ ವಿಧಿಸಲಾಗುತ್ತಿದ್ದ ಎಲ್‌ಪಿಜಿ/ವ್ಯೂಯಲ್ ಸರ್ ಚಾರ್ಜ್‌ಗೆ ನಿರ್ಬಂಧ ಹೇರಿದೆ.
ಗ್ರಾಹಕ ಸಂರಕ್ಷಣಾ ಕಾಯಿದೆಯಲ್ಲಿ ಅನ್ಯಾಯದ ವ್ಯಾಪಾರ ಪದ್ಧತಿಯಾಗಿದೆ ಎಂದು ಘೋಷಿಸಿದ್ದು, ಹೋಟೆಲ್‌ಗಳ ಸಂಘ ಈ ಆದೇಶವನ್ನು ಬೆಂಬಲಿಸಿ ಸದಸ್ಯರಿಗೆ ಸುತ್ತೋಲೆ ಕಳುಹಿಸಿದೆ. ಕೆಲವು ಹೋಟೆಲ್ ಮಾಲೀಕರು ಅನಿಲ ಬೆಲೆ ಏರಿಕೆಯ ಸವಾಲುಗಳನ್ನು ಎದುರಿಸುತ್ತಿದ್ದು, ಮೆನು ಬೆಲೆ ಹೆಚ್ಚಳ ಅನಿವಾರ್ಯ ಎನ್ನುತ್ತಿದ್ದಾರೆ. ಅಡುಗೆ ಅನಿಲದ ಬಿಕ್ಕಟ್ಟಿನ ನೆಪವೊಡ್ಡಿ ಗ್ರಾಹಕರಿಂದ ಅನಗತ್ಯವಾಗಿ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದ ಹೋಟೆಲ್‌ಗಳ ವಿರುದ್ಧ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಬೆಂಗಳೂರಿನ ಹಲವು ಹೋಟೆಲ್ಗಳು ಮೆನು ಬೆಲೆ ಮತ್ತು ತೆರಿಗೆಗಳ ಹೊರತಾಗಿ, ಎಲ್‌ಪಿಜಿ ಚಾರ್ಜ್ ಹೆಸರಿನಲ್ಲಿ ಪ್ರತ್ಯೇಕ ಶುಲ್ಕವನ್ನು ಬಿಲ್‌ನಲ್ಲಿ ಸೇರಿಸುತ್ತಿದ್ದವು. ಈ ಬಗ್ಗೆ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿರುವ ಸಿಸಿಪಿಎ, ಗ್ಯಾಸ್, ಇಂಧನ ಅಥವಾ ವಿದ್ಯುತ್ ವೆಚ್ಚಗಳು ವ್ಯವಹಾರದ ಕಾರ್ಯಾಚರಣೆಯ ಭಾಗವಾಗಿದೆ. ಇವುಗಳನ್ನು ಬಿಲ್‌ನಲ್ಲಿ ಪ್ರತ್ಯೇಕವಾಗಿ ತೋರಿಸಿ ಗ್ರಾಹಕರಿಂದ ವಸೂಲಿ ಮಾಡುವುದು ಗ್ರಾಹಕ ಸಂರಕ್ಷಣಾ ಕಾಯಿದೆ – 2019ರ ಅಡಿಯಲ್ಲಿ ಅನ್ಯಾಯದ ವ್ಯಾಪಾರ ಪದ್ಧತಿ’ ಎಂದು ಪರಿಗಣಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.
ಎಲ್‌ಪಿಜಿ ಶುಲ್ಕ ಕಾನೂನುಬಾಹಿರ:ಬಿಲ್‌ನಲ್ಲಿ ಪ್ರತ್ಯೇಕವಾಗಿ ಎಲ್‌ಪಿಜಿ ಶುಲ್ಕ ವಿಧಿಸುವುದು ಕಾನೂನುಬಾಹಿರ. ಈ ಬಗ್ಗೆ ತಮ್ಮ ಸದಸ್ಯ ಹೋಟೆಲ್‌ಗಳಿಗೆ ಸುತ್ತೋಲೆ ಕಳುಹಿಸುತ್ತೇವೆ. ಅಡುಗೆ ಅನಿಲದ ದರ ಹೆಚ್ಚಳದಿಂದ ನಷ್ಟವಾಗುತ್ತಿದ್ದರೆ, ಹೋಟೆಲ್ ಗಳು ಮೆನು ಬೆಲೆಯನ್ನು ಶೇ. 5 ರಿಂದ 10 ರಷ್ಟು ಹೆಚ್ಚಿಸಲು ಆಲೋಚಿಸಬಹುದು, ಆದರೆ ಪ್ರತ್ಯೇಕವಾಗಿ ಶುಲ್ಕ ವಿಧಿಸುವುದನ್ನು ನಾವು ಬೆಂಬಲಿಸುವುದಿಲ್ಲ ಎಂದು ಬೆಂಗಳೂರು ಹೋಟೆಲ್‌ಗಳ ಸಂಘದ ಜಿ.ಕೆ. ಶೆಟ್ಟಿ ತಿಳಿಸಿದ್ದಾರೆ.






