ಜನಮನ
1.5 ಲಕ್ಷ ರೂ ಸ್ವೀಕರಿಸುವಾಗ ಶಿರಸ್ತೇದಾರ್ ಲೋಕಾಯುಕ್ತ ಬಲೆಗೆ

Views: 0
ಶಿವಮೊಗ್ಗ ತಾಲೂಕು ಕಚೇರಿ ಕಟ್ಟಡದಲ್ಲಿರುವ ಶಿರಸ್ತೇದಾರ್ ಕಚೇರಿಗೆ ಲೋಕಾಯುಕ್ತ ದಾಳಿ ನಡೆದಿದೆ. ಈ ವೇಳೆ ಒಂದೂವರೆ ಲಕ್ಷ ರೂಪಾಯಿ ಹಣ ಸ್ವೀಕರಿಸುವಾಗ ಶಿರಸ್ತೇದಾರ್ ಅವರು ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.
ಹನುಮಂತ ಬನ್ನಿ ಕೊಡ ಎಂಬುವರಿಗೆ ಸಂಬಂಧಿಸಿದ ಖಾತೆ ಬದಲಾವಣೆಗೆ ಅರುಣ್ ಕುಮಾರ್ ಮೂರು ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಎಂದು ಆರೋಪಿಸಲಾಗಿದೆ. ಈ ದಿನ ಒಂದೂವರೆ ಲಕ್ಷ ರೂಪಾಯಿ ಹಣ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ.
ಶಿರಸ್ತೇದಾರ್ ಅರುಣ್ ಕುಮಾರ್ ಕಂದಾಯ ಇಲಾಖೆ ನೌಕರ ಸಂಘದ ಜಿಲ್ಲಾಧ್ಯಕ್ಷರಾಗಿದ್ದರು. ಲೋಕಾಯುಕ್ತ ಚಿತ್ರದುರ್ಗ ಎಸ್ಪಿ ವಾಸುದೇವ, ಶಿವಮೊಗ್ಗ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯಕ್ ನೇತೃತ್ವದಲ್ಲಿ ದಾಳಿ ನಡೆದಿದೆ.