ಶಿಕ್ಷಣ

10ನೇ ತರಗತಿ ಪರೀಕ್ಷೆ ಮುಗಿಸಿದ ವಿದ್ಯಾರ್ಥಿನಿ ನಾಪತ್ತೆ! 

Views: 108

ಕನ್ನಡ ಕರಾವಳಿ ಸುದ್ದಿ: ಮಂಗಳೂರು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು ಅಡ್ಕದ 16 ವರ್ಷದ ಬಾಲಕಿಯೊಬ್ಬಳು ಏಪ್ರಿಲ್ 12 ರಿಂದ ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಾಗಿದೆ.

ನಾಪತ್ತೆಯಾದ ಬಾಲಕಿಯನ್ನು ಜಗದೀಶ್ ಪೂಜಾರಿ ಮತ್ತು ಗುಲಾಬಿ ದಂಪತಿಯ ಪುತ್ರಿ ಚೈತನ್ಯ ಎಂದು ಗುರುತಿಸಲಾಗಿದೆ. ಹರೇಕಳದ ರಾಮಕೃಷ್ಣ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಈಕೆ, ಇತ್ತೀಚೆಗಷ್ಟೇ ಪರೀಕ್ಷೆ ಮುಗಿಸಿ ಮನೆಯಲ್ಲಿದ್ದಳು.

ಬಾಲಕಿಯ ತಾಯಿ ಗುಲಾಬಿ ನೀಡಿದ ದೂರಿನ ಪ್ರಕಾರ, ಏಪ್ರಿಲ್ 12ರಂದು ಬೆಳಿಗ್ಗೆ ಸುಮಾರು 7.30ಕ್ಕೆ ಸ್ನೇಹಿತರೊಂದಿಗೆ ಪೊಳಲಿ ದೇವಸ್ಥಾನಕ್ಕೆ ಹೋಗುವುದಾಗಿ ತಂದೆಗೆ ತಿಳಿಸಿ ಚೈತನ್ಯ ಮನೆಯಿಂದ ಹೊರಟಿದ್ದಳು. ಆದರೆ ಸಂಜೆಯಾದರೂ ಆಕೆ ಮನೆಗೆ ಮರಳಿಲ್ಲ. ಸಂಬಂಧಿಕರ ಮತ್ತು ಸ್ನೇಹಿತರ ಮನೆಗಳಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಗದ ಕಾರಣ, ಅಂತಿಮವಾಗಿ ಪೊಲೀಸ್ ದೂರು ದಾಖಲಿಸಲಾಗಿದೆ.

ಕೊಣಾಜೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 137(2) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಅಪ್ರಾಪ್ತ ಬಾಲಕಿಯನ್ನು ಪತ್ತೆಹಚ್ಚಲು ಲುಕ್‌ಔಟ್ ನೋಟಿಸ್‌ ಹೊರಡಿಸಿದ್ದಾರೆ.

Related Articles

Back to top button
error: Content is protected !!