ಇತರೆ

10ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲಾ ವಾಹನ ಚಾಲಕನಿಂದ ಲೈಂಗಿಕ ದೌರ್ಜನ್ಯ: ಗಂಡು ಮಗುವಿಗೆ ಜನ್ಮ ನೀಡಿದ ಬಾಲಕಿ 

Views: 209

ಕನ್ನಡ ಕರಾವಳಿ ಸುದ್ದಿ: ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ ವಾಹನ ಚಾಲಕನಾಗಿದ್ದ ರಂಜಿತ್ ಎಂಬಾತ 8 ತಿಂಗಳಿನಿಂದ ಲೈಂಗಿಕ ದೌರ್ಜನ್ಯವೆಸಗಿದ್ದು, ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಆರೋಪಿಯನ್ನು ಚನ್ನರಾಯಪಟ್ಟಣ ನಗರ ಠಾಣೆಯ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಅಲ್ಲದೇ, ನ್ಯಾಯಾಂಗ ಬಂಧನಕ್ಕೂ ಒಪ್ಪಿಸಿದ್ದಾರೆ. ಆತನ ಮೇಲೆ ಪೋಕ್ಸೋ ಕೇಸ್‌ ಹಾಕಲಾಗಿದೆ. ಬಾಲಕಿ ಮತ್ತು ಮಗುವನ್ನು ಕೆಲ ದಿನಗಳ ಕಾಲ ಆರೈಕೆ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಶೀಘ್ರ ಒಪ್ಪಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹಾಸನ ಡಿಹೆಚ್ಒ ಅನಿಲ್ ತಿಳಿಸಿದ್ದಾರೆ.

Related Articles

Back to top button
error: Content is protected !!