ಕರಾವಳಿ
ಗಂಗೊಳ್ಳಿ ಬೋಟ್ ಅಗ್ನಿ ಅವಘಡ ಸಂತ್ರಸ್ತರಿಗೆ ಗರಿಷ್ಠ ಪರಿಹಾರದ ಭರವಸೆ:ರಾಜ್ಯ ಮೀನುಗಾರಿಕೆ ನಿರ್ದೇಶಕ ದಿನೇಶ್ ಕುಮಾರ್ ಕಳ್ಳೇರ್

Views: 12
ಗಂಗೊಳ್ಳಿ: ಬೋಟ್ ಅಗ್ನಿ ದುರಂತ ಪ್ರಕರಣದಲ್ಲಿ ಪರಿಹಾರ ನೀಡುವ ಬಗ್ಗೆ ಸಚಿವರ ಬಳಿ ಚರ್ಚೆನಡೆದಿದ್ದು, ಆದಷ್ಟು ಬೇಗ ಮೀನುಗಾರರಿಗೆ ಸರಕಾರದಿಂದ ಗರಿಷ್ಠಪರಿಹಾರ ನೀಡಲು ಪ್ರಯತ್ನಿಸ ಲಾಗುತ್ತಿದೆ ಎಂದು ರಾಜ್ಯ ಮೀನುಗಾರಿಕೆ ಇಲಾಖೆಯ ನಿರ್ದೇಶಕ ದಿನೇಶ್ ಕುಮಾರ್ ಕಳ್ಳೇರ್ ಹೇಳಿದರು.
ಅಗ್ನಿ ದುರಂತ ಸಂಭವಿಸಿದ ಗಂಗೊಳ್ಳಿಯ ಮ್ಯಾಂಗನೀಸ್ ವಾರ್ಫ್ ಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಮೀನುಗಾರರ ಜತೆ ಸಮಾಲೋಚನೆ ನಡೆಸಿದರು.
ಹೊಸ ಬೋಟ್ ನಿರ್ಮಿಸಲು ಬ್ಯಾಂಕ್‌ನಿಂದ ಸಾಲ ಪಡೆಯುವ ಸಂದರ್ಭ ಸಹಕರಿಸುವಂತೆ ಬ್ಯಾಂಕುಗಳಿಗೆ ಮನವಿ ಮಾಡಲಾಗುವುದು. ಮುಂದಿನ ಋತು ಆರಂಭದಲ್ಲಿ ಹೊಸ ಬೋಟ್ ನಿರ್ಮಾಣಗೊಂಡು ಮೀನುಗಾರರು ಹೊಸ ಬದುಕು ಕಟ್ಟಿಕೊಳ್ಳಲು ಸಿದ್ಧರಾಗಬೇಕು ಎಂದರು.