ಕ್ರೀಡೆ
12 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ

Views: 58
ಕನ್ನಡ ಕರಾವಳಿ ಸುದ್ದಿ: ಇಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ4 ವಿಕೆಟ್‌ಗಳ ಗೆಲುವು ದಾಖಲಿಸಿದ ಟೀಂ ಇಂಡಿಯಾ 12 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿಹಿಡಿದಿದೆ.
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ್ಕೆ ಭಾರತಕ್ಕೆ ಉತ್ತಮ ಆರಂಭ ಒದಗಿಸಿದ್ರು. ನಂತರ ಬಂದ ಶ್ರೇಯಸ್ ಅಯ್ಯರ್ ಮತ್ತು ಕನ್ನಡಿಗ ಕೆ ಎಲ್ ರಾಹುಲ್ ಅವರ ಸಮಯೋಚಿತ ಆಟದ ನೆರವಿನಿಂದ ಭಾರತ ತಂಡ 49 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು ನಿಗದಿತ ಗುರಿ ತಲುಪಿತು.
2002 ಭಾರತ ಮತ್ತು ಶ್ರೀಲಂಕಾ ಜಂಟಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದವು, ಇದಾದ ಬಳಿದ ಧೋನಿ ನಾಯಕತ್ವದಲ್ಲಿ ಭಾರತ ಚಾಂಪಿಯನ್ ಆಗಿತ್ತು. ಇದೀಗ 12 ವರ್ಷಗಳ ಬಳಿಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಮತ್ತೆ ಐಸಿಸಿ ಚಾಂಪಿಯನ್ಸ್ ಟ್ರೋಪಿಯನ್ನು ಗೆದ್ದುಕೊಂಡಿದೆ.