ಶಿಕ್ಷಣ

14 ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಮುಖ್ಯ ಶಿಕ್ಷಕ,ದೇವಳದ ಪ್ರಧಾನ ಅರ್ಚಕ ಪೋಕ್ಸೋ ಕಾಯ್ದೆಯಡಿ ಬಂಧನ

Views: 140

ಅಪ್ರಾಪ್ತ ವಿಧ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಆಚಾರ್ ಎಂಬಾತನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬೋಳ ವಂಜಾರಕಟ್ಟೆ ನಿವಾಸಿ ಬರಬೈಲ್ ಶಾಲೆಯ ಮುಖ್ಯ ಶಿಕ್ಷಕ ಹಾಗೂ ಪಂಜಾರಕಟ್ಟೆ ಇಟ್ಟೋಡಿ ಶ್ರೀ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ರಾಜೇಂದ್ರ ಆಚಾ‌ರ್ ಬಂಧಿತ ಆರೋಪಿ

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಹಲವಾರು ಬಾರಿ ದೂರುಗಳಿದ್ದು, ಜನರು ಹಲವು ಬಾರಿ ಬುದ್ದಿ ಹೇಳಿದ್ದರು. ಆದರೂ ಈತನ ಹಳೆ ಚಾಳಿ ಮುಂದುವರಿಸಿದ ಪರಿಣಾಮ ಉಡುಪಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಆಗಮಿಸಿ ಸಮಗ್ರ ತನಿಖೆ ನಡೆಸಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದ ಅಪ್ರಾಪ್ತ ವಯಸ್ಸಿನ ಒಟ್ಟು 14 ವಿದ್ಯಾರ್ಥಿನಿಯರಿಂದ ದೂರು ಪಡೆದುಕೊಂಡಿದ್ದು, ಈ ಬಗ್ಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ಬಳಿಕವೇ ಈತನ ವಿರುದ್ದ ಕ್ರಮಕೈಗೊಂಡುದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮುಖ್ಯ ಶಿಕ್ಷಕ ರಾಜೇಂದ್ರ ಆಚಾ‌ರ್ ತನ್ನ ಸೇವಾವಧಿಯಲ್ಲಿ ವಿವಿಧ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ. ಪ್ರಸ್ತುತ ವರ್ಗಾವಣೆಗೊಂಡು ಬರೆಬೈಲ್ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ. ತಾನು ಕರ್ತವ್ಯ ನಿರ್ವಹಿಸಿದ ಎಲ್ಲಾ ಶಾಲೆಗಳಲ್ಲೂ ಈತನ ವಿರುದ್ಧ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನುವ ಬಗ್ಗೆ ಆರೋಪಗಳಿದ್ದವು ಎಂದು ತಿಳಿದುಬಂದಿದೆ.

Related Articles

Back to top button